ಕಾಂಗ್ರೆಸ್ ಸರ್ಕಾರ ಜಿಹಾದಿಗಳ, ಪಿಎಫ್ಐ ಭಯೋತ್ಪಾದಕರ ತಾಳಕ್ಕೆ ಕುಣಿಯುತ್ತಿದೆ! – ಬಿಜೆಪಿ ನಾಯಕರ ಕಿಡಿ
ಬೆಂಗಳೂರು: ಡಿಕೆ ಹಳ್ಳಿ, ಕೆಜಿ ಹಳ್ಳಿ, ಶಿವಮೊಗ್ಗ ಮತ್ತು ಹುಬ್ಬಳ್ಳಿ ಸೇರಿದಂತೆ ಇತರೆಡೆ ನಡೆದ ಪ್ರತಿಭಟನೆ ಮತ್ತು ಗಲಭೆಗಳ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಪ್ರತಿಭಟನೆ ಮತ್ತು ಗಲಭೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳಡಿ ಬಂಧಿಸಲಾಗಿರುವ ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮನವಿಯನ್ನು ಪರಿಶೀಲಿಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ರಾಜ್ಯ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರವು ‘ಒಂದು ಸಮುದಾಯದ ಕೋಮು ಅಪರಾಧಿಗಳಿಗೆ ಕ್ಲೀನ್ ಚಿಟ್ ನೀಡುವ ಮೂಲಕ, ಜಿಹಾದಿಗಳು ಮತ್ತು ಪಿಎಫ್‌ಐ ಭಯೋತ್ಪಾದಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ’ ಎಂದು ಆರೋಪಿಸಿದೆ.
ಇದನ್ನೂ ಓದಿ: ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ – ವಲಸೆ ಬಂದ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿಕೊಳ್ಳುವಂತೆ ರಾಜ್ಯ ಸರ್ಕಾರದಿಂದ ಸೂಚನೆ!
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ‘ಒಂದು ಕೋಮಿನ ಕಮ್ಯುನಲ್ ಅಪರಾಧಿಗಳಿಗೆ ನಮ್ಮಲ್ಲಿ ಕ್ಲೀನ್ ಚಿಟ್ ನೀಡಲಾಗುವುದು ಎಂದು ಬೋರ್ಡ್ ಹಾಕಿಕೊಂಡು ಪರಮೇಶ್ವರ ಅವರು ಕಾರ್ಯನಿರ್ವಹಿಸುತ್ತಿರುವಂತಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇರೊಂದಿದೆಯೇ?. ಈ ಸರ್ಕಾರ ಜಿಹಾದಿಗಳ, ಪಿಎಫ್ಐ ಭಯೋತ್ಪಾದಕರ ತಾಳಕ್ಕೆ ಕುಣಿಯುತ್ತಿರುವುದನ್ನು ಈ ಪತ್ರ ಸಾಭೀತು ಮಾಡಿದೆ. ಜಿಹಾದಿ ಸರ್ಕಾರದ ಎಲ್ಲಾ ಬಗೆಯ ಹಿಂದೂ ವಿರೋಧಿ ನೀತಿ-ನಿಲುವುಗಳ ವಿರುದ್ಧ ಬಿಜೆಪಿ ಹೋರಾಟ ಮುಂದುವರೆಸಲಿದೆ’ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
‘ಒಂದು’ ಕೋಮಿನ ಕಮ್ಯುನಲ್ ಅಪರಾಧಿಗಳಿಗೆ ನಮ್ಮಲ್ಲಿ ಕ್ಲೀನ್ ಚಿಟ್ ನೀಡಲಾಗುವುದು ಎಂದು ಬೋರ್ಡ್ ಹಾಕಿಕೊಂಡು @DrParameshwara ರವರು ಕಾರ್ಯನಿರ್ವಹಿಸುತ್ತಿರುವಂತಿದೆ!
ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇರೊಂದಿದೆಯೇ?
ಈ ಸರಕಾರ ಜಿಹಾದಿಗಳ, ಪಿಎಫ್ಐ ಭಯೋತ್ಪಾದಕರ ತಾಳಕ್ಕೆ ಕುಣಿಯುತ್ತಿರುವುದು ಈ ಪತ್ರ ಋುಜುವಾತು ಪಡಿಸುತ್ತಿದೆ.… pic.twitter.com/FVjeoIbMys
— BJP Karnataka (@BJP4Karnataka) July 26, 2023
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ‘ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯಲ್ಲಿನ ಗಲಭೆಕೋರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದು ಅತ್ಯಂತ ಕೆಟ್ಟ ಘಟನೆಗಳಲ್ಲಿ ಒಂದಾಗಿದ್ದು, ‘ರಾಜ್ಯದಲ್ಲಿ ಗಲಭೆ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ಪಿಎಫ್‌ಐ ಗೂಂಡಾಗಳ ವಿರುದ್ಧದ ಪ್ರಕರಣಗಳನ್ನು ಸಿದ್ದರಾಮಯ್ಯ 1.0 ಸರ್ಕಾರ ಹಿಂಪಡೆದಿದೆ. ಇದೀಗ ಗಲಭೆಕೋರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ ಅವರು ಗೃಹ ಕಾರ್ಯದರ್ಶಿಗೆ ಸೂಚಿಸಿದ್ದಾರೆ’ ಎಂದು ಕಿಡಿಕಾರಿದ್ದಾರೆ.