ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಗಡುವು ಕೆಲವೇ ದಿನಗಳು ಬಾಕಿ – ಫೆ. 17 ಋಂದು ಬೀಳಲಿದೆ ಭಾರಿ ದಂಡ!
ವಾಹನ ಸವಾರರಿಗೆ ಮಹತ್ವದ ಸುದ್ದಿಯೊಂದಿದೆ. ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಕೊನೆಯ ದಿನಾಂಕ ಹತ್ತಿರ ಬರುತ್ತಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಅಂತ್ಯವಾಗಲಿದೆ.
ಇದನ್ನೂ ಓದಿ: ಬಿಜೆಪಿಯ ಭೀಷ್ಮ ಎಲ್.ಕೆ ಅಡ್ವಾಣಿಗೆ ಒಲಿಯಿತು ಭಾರತ ರತ್ನ – ಪ್ರಧಾನಿ ಮೋದಿ ಘೋಷಣೆ
ಹೌದು, 2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ತಿಳಿಸಿತ್ತು. ಈ ಹಿಂದೆ 2023 ನವೆಂಬರ್ 17 ಕೊನೆಯ ದಿನ ಎಂದು ತಿಳಿಸಿತ್ತು ಎಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2023ರ ನ.17ರ ಗಡುವು ವಿಧಿಸಿತ್ತು. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆ 2024ರ ಫೆ.17ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈಗಾಗಲೇ ಎರಡು ಬಾರಿ ಅವಧಿ ವಿಸ್ತರಣೆ ಮಾಡಿರುವ ಇಲಾಖೆ ಇದೀಗ ಫೆ.17 ಕೊನೆಯ ದಿನಾಂಕವಾಗಿದೆ.ಇದೀಗ ಡೈಡ್‌ಲೈನ್ ಹತ್ತಿರ ಬರುತ್ತಿದ್ದು ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಫೆ.17 ರಿಂದ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲು ಮುಂದಾಗಿದೆ.
ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಏಕೆ?
ಎಚ್‌ಎಸ್‌ಆರ್‌ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ದೊರೆಯಲಿದೆ. ಜತೆಗೆ, ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರ ಮ ತೆಗೆದುಕೊಳ್ಳಲಾಗುತ್ತಿದೆ.