ವೃದ್ಧನಿಗೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿ ಬಟನ್ ಒತ್ತಿದ ಚುನಾವಣಾ ಅಧಿಕಾರಿ! – ಪ್ರಿಯಾಂಕ್ ಖರ್ಗೆ ಆಕ್ರೋಶ

ವೃದ್ಧನಿಗೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿ ಬಟನ್ ಒತ್ತಿದ ಚುನಾವಣಾ ಅಧಿಕಾರಿ! – ಪ್ರಿಯಾಂಕ್ ಖರ್ಗೆ ಆಕ್ರೋಶ

ರಾಜ್ಯಾದ್ಯಂತ ಬಿರುಸಿನಿಂದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮತದಾನದ ಕೇಂದ್ರದಲ್ಲಿ ಅಧಿಕಾರಿಯೊಬ್ಬ ವೃದ್ಧ ಮತದಾರರಿಗೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿಯ ಬಟನ್ ಒತ್ತಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಚಿತ್ತಾಪುರ ಮತಕ್ಷೇತ್ರದ ಚಾಮನೂರು ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಚುನಾವಣಾ ಸಿಬ್ಬಂದಿ ಬಿ.ಸಿ ಚೌಹಾಣ್ ಚುನಾವಣಾ ನಿಯಮ ಉಲ್ಲಂಘಿಸಿದ್ದಾರೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಸ್ಥಳಕ್ಕೆ ಆಗಮಿಸಿದ ಶಾಸಕ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಕುಟುಂಬ ಸಮೇತ ಹೆಚ್.ಡಿ ಕುಮಾರಸ್ವಾಮಿ ಮತದಾನ –  ಎಡಗೈ ಬದಲು ಬಲಗೈಗೆ ಶಾಹಿ ಹಾಕಿಸಿಕೊಂಡ ಸಿದ್ದರಾಮಯ್ಯ 

ಓರ್ವ ಶಿಕ್ಷಕರಾಗಿ ಒಂದು ಪಕ್ಷದ ಪರವಾಗಿ ವಕಾಲತ್ತು ವಹಿಸುವುದು ನಾಚಿಕೆಗೇಡಿನ ಸಂಗತಿ ಎಂದು ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಚುನಾವಣಾ ಸಿಬ್ಬಂದಿಯನ್ನು ಬದಲಿಸುವವರೆಗೂ ಮತದಾನ ಪ್ರಕ್ರಿಯ ನಡೆಸಬಾರದೆಂದು ಒತ್ತಾಯಿಸಿದರು. ತಕ್ಷಣ ಪೊಲೀಸರು ಬಿ.ಸಿ ಚೌಹಾಣ್ ಅವರನ್ನು ಬದಲಿಸಿ ಬೇರೊಬ್ಬ ಸಿಬ್ಬಂದಿಯನ್ನು ನೇಮಿಸಿದ ನಂತರ ಮತದಾನ ಪ್ರಕ್ರಿಯೆ ಆರಂಭಗೊಂಡಿತು.

suddiyaana