‘ನನ್ನ ಬಯಸುವಂತಹ ಪ್ರೀತಿ’ ಎಂದು ಸಮಂತಾ ಜೊತೆ ಬೆಡ್‌ರೂಮ್ ಫೋಟೋ ಹಂಚಿಕೊಂಡ ಖ್ಯಾತ ನಟ..!

‘ನನ್ನ ಬಯಸುವಂತಹ ಪ್ರೀತಿ’ ಎಂದು ಸಮಂತಾ ಜೊತೆ ಬೆಡ್‌ರೂಮ್ ಫೋಟೋ ಹಂಚಿಕೊಂಡ ಖ್ಯಾತ ನಟ..!

ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮತ್ತು ಸಮಂತಾ ಜೋಡಿ ಅಭಿನಯದ ಖುಷಿ ಚಿತ್ರ ಬಿಡುಗಡೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಮಧ್ಯೆ, ವಿಜಯ್ ದೇವರಕೊಂಡ ಹಂಚಿಕೊಂಡಿರುವ ಒಂದು ಫೋಟೋ ಅಭಿಮಾನಿಗಳನ್ನು ರೊಚ್ಚಿಗೆಬ್ಬಿಸಿದೆ. ನಟಿ ಸಮಂತಾ ಜೊತೆಗಿನ ಫೋಟೋ, ವಿಡಿಯೋ ಹಂಚಿಕೊಳ್ಳುವ ಮೂಲಕ ಏನೇನೋ ಹೇಳಲು ವಿಜಯ್ ದೇವರಕೊಂಡ ಯತ್ನಿಸುತ್ತಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಅಷ್ಟೇ ಅಲ್ಲ, ಸಮಂತಾ ಜೊತೆ ತಾನು ತೀರಾ ಕ್ಲೋಸ್ ಆಗಿದ್ದೇನೆ ಎಂದು ಹೇಳಿಕೊಳ್ಳಲು ಸಿನಿಮಾದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವುದು ಅಭಿಮಾನಿಗಳನ್ನು ಕೆರಳಿಸಿದೆ.

ಇದನ್ನೂ ಓದಿ:ಸಮಂತಾಗೆ ಮತ್ತೆ ಕೈ ಕೊಟ್ಟ ಆರೋಗ್ಯ.. 6 ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ? 

ಇದೀಗ ವಿಜಯ್ ದೇವರಕೊಂಡ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸಮಂತಾ ಜೊತೆ ಬೆಡ್ ರೂಮ್ ನಲ್ಲಿರುವ ದೃಶ್ಯವನ್ನು ವಿಜಯ್ ದೇವರಕೊಂಡ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಶೇರ್ ಮಾಡುವುದರ ಜೊತೆಗೆ ‘ನನ್ನ ಬಯಸುವಂತಹ ಪ್ರೀತಿ’ ಎಂದು ಬರೆದುಕೊಂಡಿದ್ದಾರೆ. ಈ ಬರಹವೇ ನಾನಾ ಚರ್ಚೆಗೆ ಕಾರಣವಾಗಿದೆ. ಅದು ಖುಷಿ ಸಿನಿಮಾದ ವಿಡಿಯೋ ಆಗಿದ್ದು, ಗಂಡ ಹೆಂಡತಿಯ ಅನ್ಯೋನ್ಯತೆಯನ್ನು ಆ ದೃಶ್ಯದಲ್ಲಿ ಸೆರೆಹಿಡಿಯಲಾಗಿದೆ. ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ತೆರೆಗೆ ಬರಲಿದೆ. ಈ ಸಿನಿಮಾ ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿದೆ. ಹಿಂದಿ, ಕನ್ನಡ, ತಮಿಳು ಮತ್ತು ಮಲಯಾಳಂನಲ್ಲಿಯೂ ಈ ಸಿನಿಮಾ ಬಿಡುಗಡೆಯಾಗಲಿದೆ.

suddiyaana