ಏಷ್ಯಾಕಪ್ ಫೈನಲ್ ಪಂದ್ಯ ಸ್ಥಳ ಬದಲಾವಣೆ ಸಾಧ್ಯತೆ – ಕೊಲಂಬೋದಲ್ಲಿ ಬದಲು ಕ್ಯಾಂಡಿಯಲ್ಲಿ ನಡೆಯಲಿದೆ ಫೈನಲ್ ಮ್ಯಾಚ್

ಏಷ್ಯಾಕಪ್ ಫೈನಲ್ ಪಂದ್ಯ ಸ್ಥಳ ಬದಲಾವಣೆ ಸಾಧ್ಯತೆ – ಕೊಲಂಬೋದಲ್ಲಿ ಬದಲು ಕ್ಯಾಂಡಿಯಲ್ಲಿ ನಡೆಯಲಿದೆ ಫೈನಲ್ ಮ್ಯಾಚ್

ಕೊಲಂಬೋದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಅಡೆತಡೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ಏಷ್ಯಾಕಪ್ ಫೈನಲ್ ಪಂದ್ಯ ನಡೆಯಬೇಕಿತ್ತು. ಆದರೆ ಫೈನಲ್ ಪಂದ್ಯದ ದಿನದಂದು ಕೊಲಂಬೊದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಪಂದ್ಯವನ್ನು ಕೊಲಂಬೊದ ಬದಲು ಕ್ಯಾಂಡಿಯಲ್ಲಿ ನಡೆಸಲು ಸಿದ್ಧತೆ ನಡೆಯುತ್ತಿದೆ.

ಇದನ್ನೂ ಓದಿ: ವೈಯಕ್ತಿಕ ಕಾರಣ ನೀಡಿ ಏಷ್ಯಾಕಪ್ ಟೂರ್ನಿ ಬಿಟ್ಟು ತಾಯ್ನಾಡಿಗೆ ಬಂದ ಬುಮ್ರಾ – ಧೋನಿಯನ್ನು ಉದಾಹರಿಸಿ ಟೀಕಿಸಿದ ಕ್ರಿಕೆಟ್‌ ಪ್ರೇಮಿಗಳು!

ಕೊಲಂಬೊದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಏಷ್ಯಾಕಪ್‌ನ ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದ್ದು, ಬಹುತೇಕ ಕ್ಯಾಂಡಿಯಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಪೂರ್ವ ನಿಗದಿಯಂತೆ ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ಏಷ್ಯಾಕಪ್ ಫೈನಲ್ ಪಂದ್ಯ ನಡೆಯಬೇಕಿತ್ತು. ಆದರೆ ಫೈನಲ್ ಪಂದ್ಯದ ದಿನದಂದು ಕೊಲಂಬೊದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಪಂದ್ಯವನ್ನು ಕೊಲಂಬೊದ ಬದಲು ಕ್ಯಾಂಡಿಯಲ್ಲಿ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಕಾರ ಏಷ್ಯಾಕಪ್ ಫೈನಲ್ ಪಂದ್ಯವು ಭಾನುವಾರ ಸೆಪ್ಟೆಂಬರ್ 17 ರಂದು ಕ್ಯಾಂಡಿಯ ಪಲ್ಲೆಕೆಲೆಯಲ್ಲಿರುವ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಸೋಮವಾರ, ಸೆಪ್ಟೆಂಬರ್ 11 ರಂದು ಫೈನಲ್ ಪಂದ್ಯದ ಸ್ಥಳ ಬದಲಾವಣೆಯ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಕೊಲಂಬೊದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭಾರತ-ಪಾಕಿಸ್ತಾನ ನಡುವಿನ ಸೂಪರ್ 4 ಹಂತದ ಪಂದ್ಯವನ್ನು ಸಹ ಮೀಸಲು ದಿನಕ್ಕೆ ಮುಂದೂಡಲಾಗಿದೆ. ಆದರೆ ಮೀಸಲು ದಿನವೂ ಸಹ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ದಿನದಂದು ಪಂದ್ಯ ಪೂರ್ಣಗೊಳ್ಳುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. ಕೊಲಂಬೊದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಈ ಹಿಂದೆಯೂ ಸೂಪರ್ 4 ಪಂದ್ಯಗಳನ್ನು ಕೊಲಂಬೊದಿಂದ ಹಂಬಂಟೋಟಾಗೆ ಬದಲಾಯಿಸಲು ಎಸಿಸಿ ಯೋಜಿಸುತ್ತಿದೆ ಎಂದು ವರದಿಯಾಗಿತ್ತು. ಆದರೆ ಮಳೆಯಿಂದಾಗಿ ಪಂದ್ಯಾವಳಿಗೆ ಹಿನ್ನಡೆಯುಂಟಾಗುವ ಆತಂಕದ ನಡುವೆಯೂ ಎಸಿಸಿ, ಸೂಪರ್ 4 ಪಂದ್ಯಗಳನ್ನು ಕೊಲಂಬೊದಲ್ಲಿ ಆಡಿಸಲು ತೀರ್ಮಾನಿಸಿತ್ತು. ಇದೀಗ ಫೈನಲ್ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ಆತಂಕವಿರುವುದರಿಂದ ಫೈನಲ್ ಪಂದ್ಯವನ್ನು ಕೊಲಂಬೊದಿಂದ ಕ್ಯಾಂಡಿಗೆ ಸ್ಥಳಾಂತರಿಸಲು ಎಸಿಸಿ ಚಿಂತಿಸಿದೆ ಎಂದು ವರದಿಯಾಗಿದೆ.

suddiyaana