ಕ್ಷಣಕ್ಷಣಕ್ಕೂ ವೇಗವಾಗಿ ವ್ಯಾಪಿಸುತ್ತಿದೆ ಕಾಡ್ಗಿಚ್ಚು! – ಭೀಕರ ಅಗ್ನಿ ದುರಂತದಲ್ಲಿ ಬಲಿಯಾದವರ ಸಂಖ್ಯೆ 122ಕ್ಕೆ ಏರಿಕೆ

ಕ್ಷಣಕ್ಷಣಕ್ಕೂ ವೇಗವಾಗಿ ವ್ಯಾಪಿಸುತ್ತಿದೆ ಕಾಡ್ಗಿಚ್ಚು! – ಭೀಕರ ಅಗ್ನಿ ದುರಂತದಲ್ಲಿ ಬಲಿಯಾದವರ ಸಂಖ್ಯೆ 122ಕ್ಕೆ ಏರಿಕೆ

ಚಿಲಿ ದೇಶದಲ್ಲಿ ಕಾಡ್ಗಿಚ್ಚಿನಿಂದ ಭಾರೀ ಅನಾಹುತ ಸೃಷ್ಟಿಯಾಗಿದೆ. ಅಗ್ನಿಯ ರೌದ್ರಾವತಾರಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕಾಡ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 122ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಂಡ್ಯ, ಹಾಸನದ ಬಿಜೆಪಿ ನಾಯಕರು ಜೆಡಿಎಸ್ ವಿರುದ್ಧ ರೆಬೆಲ್ – ದಳಪತಿಗಳಿಗೆ ಶುರುವಾಯ್ತು ಆತಂಕ

ಹೌದು, ಅಮೆರಿಕದ ಮಧ್ಯ ಚಿಲಿಯಲ್ಲಿ ಹರಡಿದ ರಣಭಯಂಕರ ಕಾಡ್ಗಿಚ್ಚಿಗೆ ಜನರ ಬದುಕು ಅಕ್ಷರಶಃ ನರಕವಾಗಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 64 ಸಾವಿರ ಎಕರೆ ಕಾಡು ಬೆಂಕಿಗಾಹುತಿಯಾಗಿದೆ. ಸಾವಿರಾರು ಮನೆ, ಕಟ್ಟಡಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ.  ಜನರ ಬದುಕು ಮೂರಾ ಬಟ್ಟೆಯಾಗಿದೆ. ಸಾವನ್ನಪ್ಪಿದವರ ಸಂಖ್ಯೆ 122 ಕ್ಕೆ ಏರಿಕೆಯಾಗಿದೆ. ಸಾವಿರಾರು ಜನರಿಗೆ ಗಾಯಗಳಾಗಿವೆ. ಕೆಲವರ ಪರಿಸ್ಥಿತಿ ಗಂಭೀರವಾಗಿದೆ. 200ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

ಸುಮಾರು 92 ಪ್ರದೇಶಗಳಲ್ಲಿ ಬೆಂಕಿ ಹಬ್ಬಿದ್ದು, ಮನೆಗಳಲ್ಲಿದ್ದ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕಾಡ್ಗಿಚ್ಚಿನಿಂದ ಮನೆ ಕಳೆದುಕೊಂಡವರಿಗಾಗಿ ವಾಲ್ಪಾರಾಸೊ ಪ್ರದೇಶದಲ್ಲಿ ಮೂರು ಶೆಲ್ಟರ್‌ಗಳನ್ನು ಸ್ಥಾಪಿಸಲಾಗಿದೆ. 4 ಆಸ್ಪತ್ರೆಗಳು ಮತ್ತು 3 ನರ್ಸಿಂಗ್​ ಹೋಮ್​ಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ.  ಅಗ್ನಿಶಾಮಕ ಸಿಬ್ಬಂದಿ ಹೆಲಿಕಾಪ್ಟರ್‌ ಮತ್ತು ಟ್ರಕ್‌ಗಳನ್ನು ಬಳಸಿ ಬೆಂಕಿ ನಂದಿಸುವ ಕೆಲಸ ಮಾಡಲಾಗ್ತಿದೆ. ಅಪಾಯದಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಲಾಗುತ್ತಿದೆ. ಕಳೆದ ಒಂದು ದಶಕದಲ್ಲಿ ಚಿಲಿಯಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ಅಂತ ಹೇಳಲಾಗ್ತಿದೆ.

Shwetha M