ಸಿಬ್ಬಂದಿಗೆ ವೇತನ ನೀಡಲು ಮನೆಯನ್ನೇ ಅಡವಿಟ್ಟ ಬೈಜೂಸ್ ಸಂಸ್ಥಾಪಕ!

ಸಿಬ್ಬಂದಿಗೆ ವೇತನ ನೀಡಲು ಮನೆಯನ್ನೇ ಅಡವಿಟ್ಟ ಬೈಜೂಸ್ ಸಂಸ್ಥಾಪಕ!

ಒಂದು ಕಾಲದಲ್ಲಿ ಒಳ್ಳೆಯ ಹೆಸರು ಮಾಡಿದ್ದ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೈಜುಸ್ ಕೂಡ ಒಂದು. ಆದರೆ ಇಂದು ಅದೇ ಕಂಪೆನಿ ಆರ್ಥಿಕ ಸಂಕಷ್ಟಕೆ ಸಿಲುಕಿದೆ. ತನ್ನ ಸಿಬ್ಬಂದಿಗೆ ವೇತನ ಕೊಡಲು ಪರದಾಡುವ ಪರಿಸ್ಥಿತಿಗೆ ಬಂದಿದೆ. ಆದರೆ ಇದೀಗ ಬೈಜೂಸ್‌ ಸಂಸ್ಥಾಪಕ ತಮ್ಮ ಮನೆಯನ್ನೇ ಅಡವಿಟ್ಟು ಸಂಬಳ ನೀಡುವ ಮೂಲಕ ಭಾರಿ ಸುದ್ದಿಯಾಗಿದ್ದಾರೆ.

ಕೋವಿಡ್ ಬಳಿಕ ಬೈಜುಸ್ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮತ್ತೆ ಪ್ರಗತಿ ಕಾಣಲು ಹರಸಾಹಸ ಪಡುತ್ತಿದೆ. ತನ್ನ ಹದಿನೈದು ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ವೇತನ ನೀಡಲು ಹಣದ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬೈಜುಸ್ ಮಾಲೀಕ ರವೀಂದ್ರನ್ ತನ್ನ ಸಿಬ್ಬಂದಿಗಳಿಗೆ ವೇತನ ನೀಡಲು ಬೆಂಗಳೂರಿನಲ್ಲಿರುವ ತನ್ನ ಐಷಾರಾಮಿ ಬಂಗಲೆಗಳನ್ನು ಅಡವಿಟ್ಟು ವೇತನವನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚಿಕನ್​ ಪೀಸ್‌ ಇಲ್ಲದ ಬಿರಿಯಾನಿ ಕೊಟ್ಟ ಹೋಟೆಲ್‌ ಸಿಬ್ಬಂದಿ – ತಿಳಿದೋ, ತಿಳಿಯದೆಯೋ ಮಾಡಿದ ತಪ್ಪಿಗೆ ಕಟ್ಟಿದ ದಂಡ ಎಷ್ಟು ಗೊತ್ತಾ?

ಬೈಜುಸ್‌ ಮಾಲೀಕ ರವೀಂದ್ರನ್ ಅವರ ಕುಟುಂಬವು ಬೆಂಗಳೂರಿನಲ್ಲಿ ಎರಡು ಮನೆಗಳು ಹಾಗೂ ನಿರ್ಮಾಣ ಹಂತದಲ್ಲಿರುವ ವಿಲ್ಲಾ ಒಂದು ಇದೆ. ಇವುಗಳನ್ನು ಅಡವಿಟ್ಟು ಸುಮಾರು 100 ಕೋಟಿ ರೂ. ಸಾಲ ಪಡೆದಿದ್ದಾರೆ. ಈ ಸಾಲದಿಂದ ತಮ್ಮ ಉದ್ಯೋಗಿಗಳಿಗೆ ನವೆಂಬರ್ ತಿಂಗಳ ವೇತನವನ್ನು ನೀಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಸೋಮವಾರದಂದು ಮಾತೃ ಸಂಸ್ಥೆಯಾದ ಥಿಂಕ್ & ಲರ್ನ್ ಪ್ರೈವೇಟ್‍ನ 15,000 ಉದ್ಯೋಗಿಗಳಿಗೆ ಸಂಬಳ ಪಾವತಿಸಲು ಸ್ಟಾರ್ಟಪ್ ತನ್ನಲ್ಲಿರುವ ಹಣವನ್ನು ಬಳಸಿಕೊಂಡಿದ್ದಾರೆ. ಇನ್ನು ಕಡಿಮೆಯಾದ ಮೊತ್ತಕ್ಕೆ ಈ ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಿಬ್ಬಂದಿಯ ಸಂಬಳ ವಿಳಂಬಕ್ಕೆ ಏಕಾಏಕಿ ಉಂಟಾದ ತಾಂತ್ರಿಕ ದೋಷವೆಂದು ಬೈಜೂಸ್ ಕಾರಣ ನೀಡಿತ್ತು. ಅಲ್ಲದೆ ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ ಸ್ಪಷ್ಟನೆ ನೀಡಿತ್ತು. ಡಿಸೆಂಬರ್ 4ರ ಸೋಮವಾರದೊಳಗೆ ಸಂತ್ರಸ್ತ ಉದ್ಯೋಗಿಗಳ ವೇತನವನ್ನು ಅವರ ಖಾತೆಗಳಿಗೆ ಜಮೆ ಮಾಡುವ ಭರವಸೆಯನ್ನು ನೀಡಿತ್ತು. ಕೊಟ್ಟ ಮಾತಿನಂತೆ ಈಗ ಬೈಜೂಸ್‌ ಮಾಲೀಕ ವೇತನವನ್ನು ನೀಡಿದ್ದಾರೆ. ರವೀಂದ್ರನ್ ಅವರು ತಮ್ಮ ಮನೆಯನ್ನೇ ಅಡವಿಟ್ಟು ಉದ್ಯೋಗಿಗಳ ವೇತನ ಪಾವತಿ ಮಾಡಿದ್ದಾರೆ.

Shwetha M