ಏಪ್ರಿಲ್ 10ಕ್ಕೆ ದಿ ಗೋಟ್ ಲೈಫ್ ಸಿನಿಮಾ ರಿಲೀಸ್ – ಪೃಥ್ವಿರಾಜ್ ಸುಕುಮಾರನ್ ಮತ್ತು ಬ್ಲೆಸ್ಸಿ ಕೆಮೆಸ್ಟ್ರಿ ನೋಡಲು ಫ್ಯಾನ್ಸ್ ಕಾತರ

ಏಪ್ರಿಲ್ 10ಕ್ಕೆ ದಿ ಗೋಟ್ ಲೈಫ್ ಸಿನಿಮಾ ರಿಲೀಸ್ – ಪೃಥ್ವಿರಾಜ್ ಸುಕುಮಾರನ್ ಮತ್ತು ಬ್ಲೆಸ್ಸಿ ಕೆಮೆಸ್ಟ್ರಿ ನೋಡಲು ಫ್ಯಾನ್ಸ್ ಕಾತರ

ದಿ ಗೋಟ್ ಲೈಫ್.. ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹುನಿರೀಕ್ಷೆಯ ಚಿತ್ರ. ಮಲಯಾಳಂ ಚಿತ್ರರಂಗದ ಅತಿ ದೊಡ್ಡ ಬಜೆಟ್‌ನ ಸಿನಿಮಾ. ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ  ನಿರ್ದೇಶನದ ಸಿನಿಮಾ. ದಿ ಗೋಟ್ ಲೈಫ್, ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾ ರಿಲೀಸ್ ಗೆ ಈಗ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ:ಲೂಸಿಫರ್- 2 ಚಿತ್ರಕ್ಕೆ ಸಜ್ಜಾದ ಲೈಕಾ ಸಂಸ್ಥೆ – ಪೃಥ್ವಿರಾಜ್ ಸುಕುಮಾರನ್, ಮೋಹನ್ ಲಾಲ್ ನಟನೆಯ ಚಿತ್ರಕ್ಕೆ ಎಂಪೂರನ್ ಟೈಟಲ್ ಫಿಕ್ಸ್

ಡಿಫರೆಂಟ್ ಲುಕ್.. ವಿಶೇಷ ಮ್ಯಾನರಿಸಂ, ಅಷ್ಟೇ ಅಲ್ಲ, ಪೃಥ್ವಿರಾಜ್ ಸುಕುಮಾರನ್ ಹಲವು ಶೇಡ್‌ಗಳಲ್ಲಿ ಕಾಣಿಸಿಕೊಂಡ ಬಹುನಿರೀಕ್ಷಿತ ಚಿತ್ರವೇ ದಿ ಗೋಟ್ ಲೈಫ್.. ಸತತ 5 ವರ್ಷಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದರು ಹಲವಾರು ಅಡೆತಡೆಗಳು ಎದುರಾಗಿ ಇದುವರೆಗೂ ಚಿತ್ರ ರಿಲೀಸ್ ಆಗುವ ಸೂಚನೆಯೇ ಸಿಕ್ಕಿರಲಿಲ್ಲ. ಈಗ ದಿ ಗೋಟ್ ಲೈಫ್ ಚಿತ್ರತಂಡ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ದಿ ಗೋಟ್ ಲೈಫ್ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ  ಕಥೆ ಆಧರಿಸಿದ ಚಿತ್ರವಾಗಿದೆ. ಬ್ಲೆಸ್ಸಿ ನಿರ್ದೇಶನದ ಈ ಸಿನಿಮಾವನ್ಬು ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದೆ.

ದಿ ಗೋಟ್ ಲೈಫ್ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಪ್ರಸಿದ್ಧ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಟ್ ಲೈಫ್ ಅಕಾಡೆಮಿ ಪ್ರಶಸ್ತಿ ವಿಜೇತರಾದ ಎ.ಆರ್.ರೆಹಮಾನ್ ಮತ್ತು ರೆಸುಲ್ ಪೂಕುಟ್ಟಿ ಅವರ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವಿದೆ. ಚಿತ್ರದ ಅದ್ಭುತ ದೃಶ್ಯಗಳನ್ನು ಸುನಿಲ್ ಕೆ.ಎಸ್ ತಮ್ಮ ಕ್ಯಾಮೆರಾದಲ್ಲಿ ಚಿತ್ರೀಕರಿಸಿದ್ದಾರೆ ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ.  ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮಲಯಾಳಂ ಚಿತ್ರೋದ್ಯಮದ ಅತಿದೊಡ್ಡ ಸಿನಿಮಾ ಎನ್ನಲಾಗುತ್ತಿದೆ.

ಅಂದಹಾಗೆ ಈ ಚಿತ್ರ ಮಲಯಾಳಂ ಸಾಹಿತ್ಯ ಪ್ರಪಂಚದ ಅತ್ಯಂತ ಜನಪ್ರಿಯ ಕಾದಂಬರಿ ‘ಆಡು ಜೀವಿತಂ’ ಆಧರಿಸಿದೆ, ಇದು ವಿದೇಶಿ ಸೇರಿದಂತೆ 12 ವಿವಿಧ ಭಾಷೆಗಳಲ್ಲಿ ಅನುವಾದಗೊಂಡಿದೆ.  ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಾದಂಬರಿ  90 ರ ದಶಕದಲ್ಲಿ ಅದೃಷ್ಟ ಹುಡುಕಿ ವಲಸೆ ಬಂದ ನಜೀಬ್ ಎಂಬ ಯುವಕನ ನೈಜ ಕಥೆಯನ್ನು ಹೊಂದಿದೆ. ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಬ್ಲೆಸ್ಸಿ,ದಿ ಗೋಟ್ ಲೈಫ್ ಎಲ್ಲೆಡೆ ಸಲ್ಲುವ ಕಥೆ. ನಿರೂಪಣೆ ಸಲುವಾಗಿ ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡಿದ್ದೇನೆ. ಕಾದಂಬರಿಯನ್ನು ಸಿನಿಮಾ ಮಾಡುವಾಗ ಅನೇಕ ಸವಾಲು ಎದುರಾದವು.  ಪ್ರೇಕ್ಷಕರಿಗೆ ಒಳ್ಳೆಯ ಸಿನಿಮಾ ಕೊಡುವ ಪ್ರಯತ್ನ ಮಾಡಿದ್ದೇನೆ ಎಂದಿದ್ದಾರೆ. ಗೋಟ್ ಲೈಫ್  ಏಪ್ರಿಲ್ 10 ರಂದು ಹಿಂದಿ, ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡದಲ್ಲಿ  ಬಿಡುಗಡೆಯಾಗಲಿದೆ.

Sulekha