ಮೂಗಿನ ಮೂಲಕ ಕೋವಿಡ್ ಲಸಿಕೆ – ತುರ್ತು ಬಳಕೆಗೆ ಕೇಂದ್ರ ಅಸ್ತು

ಮೂಗಿನ ಮೂಲಕ ಕೋವಿಡ್ ಲಸಿಕೆ – ತುರ್ತು ಬಳಕೆಗೆ ಕೇಂದ್ರ ಅಸ್ತು

ನವದೆಹಲಿ: ದೇಶದಾದ್ಯಂತ ಕೋವಿಡ್ ಪಾಸಿಟಿವ್ ಪ್ರಕರಣ ಹೆಚ್ಚುತ್ತಿದೆ. ಈಗಾಗಲೇ ಕೇಂದ್ರ, ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಕೋವಾಕ್ಸಿನ್‌ ಲಸಿಕೆ ಅಭಿವೃದ್ಧಿಪಡಿಸಿದ ಹೈದರಾಬಾದ್‌ನ ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ ಕೋವಿಡ್ ಲಸಿಕೆಯ  ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲು ಸರ್ಕಾರ  ಅನುಮೋದಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಕೋವಿಡ್ ಕಾಟ..! ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ?- ಬಿಬಿಎಂಪಿಯಿಂದ ಚಿಂತನೆ

ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ತೆಗೆದುಕೊಂಡವರು iNCOVACC ಮೂಗಿನ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ತೆಗೆದುಕೊಳ್ಳಬಹುದು. ಸೂಜಿ ರಹಿತವಾಗಿರುವ ಈ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ  ಲಭ್ಯವಿರುತ್ತದೆ ಎಂದು ಮನಸುಖ್ ಮಾಂಡವೀಯ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಕೋ-ವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಇದನ್ನು ಪರಿಚಯಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಎರಡು-ಡ್ರಾಪ್‌ ಲಸಿಕೆಯನ್ನು ಹಾಕಲಾಗುತ್ತದೆ. ಒಂದು ಲಸಿಕೆಯನ್ನು ಪಡೆದ 4 ವಾರಗಳ ಬಳಿಕ ಇನ್ನೊಂದು ಲಸಿಕೆಯನ್ನು ಹಾಕಿಸಿಕೊಳ್ಳಬೇಕಾಗುತ್ತದೆ. ನವೆಂಬರ್‌ನಲ್ಲಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್‌ನಂತೆ iNCOVACC ಲಸಿಕೆ ನೀಡಬಹುದು ಎಂದು ಅನುಮೋದನೆ ನೀಡಿತ್ತು.

suddiyaana