ಮಾಂಡೌಸ್ ಎಫೆಕ್ಟ್: ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಮಾಂಡೌಸ್ ಎಫೆಕ್ಟ್: ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು: ಮಾಂಡೌಸ್ ಚಂಡಮಾರುತದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಶೀತಗಾಳಿ, ಹಾಗೂ ಅತಿ ಕಡಿಮೆ ತಾಪಮಾನ ವರದಿಯಾಗಿದೆ. ಇನ್ನೂ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ಘೋಷಿಸಿದೆ.

ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಸಾರ್ವಜನಿಕರು, ಮಕ್ಕಳು (ನವಜಾತ ಶಿಶುಗಳೂ ಸೇರಿದಂತೆ), ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಂದ ಬಳಲುತ್ತಿರುವವರನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್ ಪತ್ತೆ – ರಾಯಚೂರು ಜಿಲ್ಲಾಡಳಿತ ಹೈಅಲರ್ಟ್

ಅನುಸರಿಸಬೇಕಾದ ಕ್ರಮಗಳ ಪಟ್ಟಿ

  • ಯಾವಾಗಲೂ ಬೆಚ್ಚಗಿನ ನೀರು / ಸೂಪ್‌ಗಳನ್ನು ಕುಡಿಯುವುದು.
  • ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು.
  • ಯಾವಾಗಲೂ ಸ್ವೆಟರ್ ಸಾಕ್ಸ್ ಹಾಗೂ ಕೈಗವಸುಗಳನ್ನು ಧರಿಸುವುದು.
  • ಅನಗತ್ಯ ಹೊರ ಸಂಚಾರ ತಪ್ಪಿಸಬೇಕು.
  • ಸ್ನಾನಕ್ಕೆ ಬಿಸಿ ನೀರು ನೀರನ್ನು ಉಪಯೋಗಿಸುವುದು.
  • ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳಬೇಕು ಅಥವಾ ಸ್ಟಾರ್ಫ್ ಕಟ್ಟಿಕೊಳ್ಳಬೇಕು ಹಾಗೂ ಮನೆಯಿಂದ ಹೊರ ಹೋಗುವಾಗ ಮಾಸ್ಕ್ ಧರಿಸಬೇಕು.
  • ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಿರುವರಿಂದ ದೂರವಿರಬೇಕು.
  • ಸೀನುವಾಗ / ಕೆಮ್ಮುವಾಗ ಕರವಸ್ತ್ರವನ್ನು ಬಳಸಬೇಕು.
  • ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯುವುದು.
  • ಶೀತ, ಜ್ವರ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳಿದ್ದಲ್ಲ, ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು.
  • ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು.
  • ತಣ್ಣಗಿನ ಪಾನೀಯಗಳು ಐಸ್ ಕ್ರೀಂಗಳನ್ನು ಸೇವಿಸಬಾರದು.
  • ರೆಫ್ರಿಜರೇಟರ್‌ನ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು.
  • ಮಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು.
  • ಹೊರಾಂಗಣ ಪ್ರವಾಸಗಳನ್ನು ಆದಷ್ಟು ನಿರ್ಬಂಧಿಸಿ ( ವಿಶೇಷವಾಗಿ ಗಿರಿಧಾಮಗಳಿಗೆ ವಾರಾಂತ್ಯದ ಪ್ರವಾಸ)
  • ಮಸಾಲಾಯುಕ್ತ ಪದಾರ್ಥಗಳು / ಜಂಕ್ ಫುಡ್‌ಗಳ ಸೇವನೆ ಕಡಿಮೆ ಮಾಡಬೇಕು

suddiyaana