ಮುಂದಿನ ದಶಕ ‘ನೀರಾವರಿ ದಶಕ’ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಮುಂದಿನ ದಶಕ ‘ನೀರಾವರಿ ದಶಕ’ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಯಾದಗಿರಿ: ಮುಂದಿನ ದಶಕವನ್ನು ನೀರಾವರಿ ದಶಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹನಿ ನೀರನ್ನೂ ಕೂಡಾ ಸಮಗ್ರವಾಗಿ ಬಳಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾದಗಿರಿಯಲ್ಲಿ ನಡೆದ ವಿವಿಧ ಯೋಜನೆಗಳಿಗೆ ನರೇಂದ್ರ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ,  ಸುರಪುರದ ರಾಜಮನೆತನದ ಕೊಡುಗೆಯನ್ನು ಸ್ಮರಿಸಿದರು. ರಾಜಾ ವೆಂಕಟಪ್ಪನಾಯಕರ ಸ್ವಾತಂತ್ರ್ಯ ಹೋರಾಟವನ್ನು ವಿವರಿಸಿದರು. ಸಿಎಂ ಬೊಮ್ಮಾಯಿ ತಮ್ಮ ಭಾಷಣದಲ್ಲಿ ಪ್ರತಿ ಹನಿಯ ಸಮಗ್ರ ಬಳಕೆ ಮಾಡುವ ಮೋದಿ ಅವರ ಆಶಯವನ್ನು ವಿವರಿಸಿದರು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆ ಆರಂಭವಾಗಿತ್ತು. ಆದರೆ ನಂತರ ಯುಪಿಎ ಸರ್ಕಾರದಿಂದ ನಮಗೆ ಬರಬೇಕಿದ್ದ ಈ ಯೋಜನೆ ತಡವಾಯಿತು. ಮುಂದೆ 2014ರಲ್ಲಿ ಮೋದಿ ಪ್ರಧಾನಿಯಾದ ನಂತರ 2015ರಲ್ಲಿ ತ್ವರಿತಗತಿಯ ಯೋಜನೆಯಲ್ಲಿ ಈ ಕಾಮಗಾರಿ ಆರಂಭವಾಯಿತು ಎಂದರು.

ಇದನ್ನೂ ಓದಿ:  ‘ಒಂದು ದೇಶ-ಒಂದು ಪೊಲೀಸ್ ಸಮವಸ್ತ್ರ’ಕ್ಕೆ ರಾಜ್ಯ ಗೃಹ ಇಲಾಖೆ ಅಸ್ತು!

ಸುಮಾರು 10,000 ಕೋಟಿ ಮೌಲ್ಯದ ಹಲವು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಲು ಆರಂಭಿಸಿದ ಸಿಎಂ ಬೊಮ್ಮಾಯಿ ಮೊದಲಿಗೆ, ಬೋಲೋ ಭಾರತ್ ಮಾತಾ ಕಿ ಜೈ ಎಂದು ಭಾಷಣ ಆರಂಭಿಸಿದರು. ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರುತ್ತಿದೆ. 4.5 ಲಕ್ಷ ಎಕರೆಯ ವಿಸ್ತೀರ್ಣದಲ್ಲಿ ಕೊನೆಯ ಹಂತದಲ್ಲಿ ನೀರು ತಲುಪುತ್ತಲೇ ಇರಲಿಲ್ಲ. ಇಂದು ಎಲ್ಲ ಶಾಖಾ ನಾಲೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತದೆ. ಹೀಗಾಗಿ ಈ ಯೋಜನೆಯು ಬಹಳ ಮುಖ್ಯವಾಗುತ್ತದೆ. ನಮ್ಮ ನಾಲೆಗಳಲ್ಲಿ ಶೇ 20ರಷ್ಟು ಹೆಚ್ಚು ನೀರು ಹರಿಸಲು ಸಾಧ್ಯವಾಗುತ್ತಿದೆ. ನೀರು ಹರಿಯುವ ಸಮಗ್ರ ಮಾಹಿತಿ ದಾಖಲಾಗುವುದರಿಂದ ನಿರ್ವಹಣೆ ಸುಲಭವಾಗುತ್ತದೆ’ ಎಂದರು.

suddiyaana