ಗಗನಕ್ಕೇರುತ್ತಿದೆ ಬೆಳ್ಳುಳ್ಳಿ ಬೆಲೆ! – ಕೆ.ಜಿ ಬೆಳ್ಳುಳ್ಳಿಗೆ 500ರ ಗಡಿದಾಟಿದ ದರ!
ಟೊಮ್ಯಾಟೋ, ಈರುಳ್ಳಿ ಬಳಿಕ ಈಗ ಬೆಳ್ಳುಳ್ಳಿಗೆ ಬಂಗಾರದ ಬೆಲೆ ಬಂದಿದೆ. ದಿನದಿಂದ ದಿನಕ್ಕೆ ಬೆಳ್ಳುಳ್ಳಿ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ತರಕಾರಿ ಮಾರುಕಟ್ಟೆಗಳಲ್ಲಿ ಬೆಳ್ಳುಳ್ಳಿ ಕೆಜಿಗೆ 400ರಿಂದ 500 ರೂ.ಗೆ ಮಾರಾಟವಾಗುತ್ತಿದೆ.
ಇದನ್ನೂ ಓದಿ: ಪ್ರಚೋದನಕಾರಿ ಹೇಳಿಕೆ – ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು
ಈಚೆಗೆ ಟೊಮ್ಯಾಟೋ, ಈರುಳ್ಳಿ ಗ್ರಾಹಕರಿಗೆ ಬೆಚ್ಚಿ ಬೀಳಿಸಿದ್ದವು. ಈಗ ಬೆಳ್ಳುಳ್ಳಿ. ಕಳೆದ ವಾರ ಕೆಜಿಗೆ 200 ರಿಂದ 300 ರೂ. ಇದ್ದ ಬೆಳ್ಳುಳ್ಳಿ ಈಗ ದುಪ್ಪಟ್ಟಾಗಿದೆ. ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ಬೆಳ್ಳುಳ್ಳಿ ಬೆಲೆ ಸರಿಯಾಗಿ ಬಂದಿಲ್ಲ. ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಬೆಳ್ಳುಳ್ಳಿ ಕೆ.ಜಿಗೆ ಹಾಪ್ ಕಾಮ್ಸ್ ನಲ್ಲಿ 500ರ ಗಡಿ ದಾಟಿದೆ. ಬಿಡಿಸಿದ ಬೆಳ್ಳುಳ್ಳಿ 540 ರೂ. ಆಗಿದ್ರೆ, ಉಂಡೆ ಬೆಳ್ಳುಳ್ಳಿಗೆ ಕೆ.ಜಿಗೆ 492 ರೂ. ಇದೆ.
ಬೆಳ್ಳುಳ್ಳಿ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಈ ವರ್ಷ ಸರಿಯಾದ ಮಳೆಯಾಗಿಲ್ಲ. ಅಕಾಲಿಕ ಮಳೆ, ಹವಾಮಾನ ವೈಪರೀತ್ಯ ಹಿನ್ನೆಲೆ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇಷ್ಟು ದಿನಗಳ ಕಾಲ ನಾಸಿಕ್, ಪೂನಾದಿಂದ ಬರುತ್ತಿದ್ದ ಬೆಳ್ಳುಳ್ಳಿಯ ರಫ್ತು ಕಡಿಮೆಯಾಗಿದೆ. ರಾಜ್ಯದಲ್ಲಿ ಬೆಳಗಾವಿ ಭಾಗಗಳಿಂದ ಬರೋ ಬೆಳ್ಳುಳ್ಳಿ ಸಹ ಕಡಿಮೆಯಾಗಿದೆ. ಹೀಗಾಗಿ ಬೆಳ್ಳುಳ್ಳಿ ಒಗ್ಗರಣೆ ಘಾಟು ಜೋರಾಗಿದೆ. ಬೆಳ್ಳುಳ್ಳಿ ಹೊಸ ಬೆಳೆ ಬರೋವರೆಗೂ ರೇಟ್ ಕಡಿಮೆಯಾಗೋ ಸಾಧ್ಯತೆಯಿಲ್ಲ. ಇದ್ರಿಂದಾಗಿ ಗೃಹಿಣಿಯರು ಅರ್ಧ ಕೆ.ಜಿ, ಒಂದು ಕೆಜಿ ಕೊಳ್ಳೋ ಕಡೆ 100 ಗ್ರಾಂ, 200 ಗ್ರಾಂ ಕೊಳ್ಳೋ ಹಾಗೆ ಆಗಿದೆ.