ರಿಷಬ್ ಶೆಟ್ಟಿ ನಿರ್ದೇಶನದ ‘ಲಾಫಿಂಗ್ ಬುದ್ದ’ ಸಿನಿಮಾ ಶೂಟಿಂಗ್ ಮುಕ್ತಾಯ – ಪ್ರಮೋದ್ ಶೆಟ್ಟಿಗೆ ತೇಜು ಬೆಳವಾಡಿ ಸಾಥ್

ರಿಷಬ್ ಶೆಟ್ಟಿ ನಿರ್ದೇಶನದ ‘ಲಾಫಿಂಗ್ ಬುದ್ದ’ ಸಿನಿಮಾ ಶೂಟಿಂಗ್ ಮುಕ್ತಾಯ – ಪ್ರಮೋದ್ ಶೆಟ್ಟಿಗೆ ತೇಜು ಬೆಳವಾಡಿ ಸಾಥ್

ಕಾಂತಾರ ಪಾರ್ಟ್ ಟು ಸಿನಿಮಾದ ಚಿತ್ರೀಕರಣಕ್ಕೆ ಸಜ್ಜಾಗುತ್ತಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಈಗ ಮತ್ತೊಂದು ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ರಿಷಬ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ‘ಲಾಫಿಂಗ್ ಬುದ್ದ’  ಚಿತ್ರದ ಚಿತ್ರೀಕರಣ ಈಗ ಮುಕ್ತಾಯವಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ಇದುವರೆಗೆ ಪೋಷಕ ನಟನಾಗಿ ಗುರುತಿಸಿಕೊಂಡಿರುವ ಪ್ರಮೋದ್ ಶೆಟ್ಟಿ ಇದೇ ಮೊದಲ ಬಾರಿಗೆ ಈ ಚಿತ್ರದ ಮೂಲಕ ನಾಯಕನಾಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ‘ಟೋಬಿ’ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ರಗಡ್ ಲುಕ್..! – ನಟನ ಅವತಾರ ನೋಡಿ ಅಭಿಮಾನಿಗಳಿಗೆ ಅಚ್ಚರಿ..!

ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ‘ಲಾಫಿಂಗ್ ಬುದ್ದ’  ಸಿನಿಮಾದ  ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆ ಹೊಂದಿರುವ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ  ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ‘ಲಾಫಿಂಗ್ ಬುದ್ದ’ ಚಿತ್ರಕ್ಕಿದೆ.

suddiyaana