ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ಸ್ಥಳ ಮಹಜರಿಗೆ ರೇವಣ್ಣ ನಿವಾಸಕ್ಕೆ ಸಂತ್ರಸ್ತೆ ಜೊತೆ SIT ತಂಡ ಎಂಟ್ರಿ!

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ಸ್ಥಳ ಮಹಜರಿಗೆ ರೇವಣ್ಣ ನಿವಾಸಕ್ಕೆ ಸಂತ್ರಸ್ತೆ ಜೊತೆ SIT ತಂಡ ಎಂಟ್ರಿ!

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಸ್‌ಐಟಿ ಅಧಿಕಾರಿಗಳು ಹಲವು ಆಯಾಮಗಳಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಕೆಲ ಸಂತ್ರಸ್ತ ಮಹಿಳೆಯರು ಎಸ್‌ಐಟಿ ಮುಂದೆ ಹಾಜರಾಗಿ ದೂರು ನೀಡಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿನ ಹೆಚ್​​.ಡಿ ರೇವಣ್ಣರ ಚೆನ್ನಾಂಬಿಕೆ ನಿವಾಸಕ್ಕೆ ಸಂತ್ರಸ್ತೆ ಮಹಿಳೆಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ.

ಇದನ್ನೂ ಓದಿ: ಗುಜರಾತ್ ಟೈಟನ್ಸ್ vs ಆರ್‌ಸಿಬಿ ಹೈವೋಲ್ಟೇಜ್‌ ಪಂದ್ಯ – ನಮ್ಮ ಮೆಟ್ರೋ ಅವಧಿ ವಿಸ್ತರಣೆ!

ಎಸ್‌ಐಟಿ ಅಧಿಕಾರಿಗಳು  ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು. ಸಂತ್ರಸ್ತ ಮಹಿಳೆಯೊಂದಿಗೆ ಐದು ವಾಹನಗಳಲ್ಲಿ ಬಂದ ಎಸ್ ಐಟಿ ತಂಡಕ್ಕೆ ಹಾಸನ ಎಎಸ್ ಪಿ ತಮ್ಮಯ್ಯ ಅವರನ್ನೊಳಗೊಂಡ ಸ್ಥಳೀಯ ಪೊಲೀಸರು ಸಾಥ್ ನೀಡಿದರು. ರೇವಣ್ಣ ಅವರ ನಿವಾಸದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಲಾಯಿತು.

ಸಂತ್ರಸ್ತೆಯನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಏನೆಲ್ಲ ನಡೆಯಿತು ಎಂಬುದನ್ನು ಸ್ಥಳ ಮಹಜರು ಅನ್ನು ಅಧಿಕಾರಿಗಳು ಮಾಡಿದ್ದಾರೆ. ಅಧಿಕಾರಿಗಳು ಮಹಜರು ಪ್ರಕ್ರಿಯೆ ವಿಡಿಯೋ ಮಾಡಿದರು. ಪಂಚನಾಮೆ ಬಳಿಕ ಸ್ಥಳದಲ್ಲಿಯೇ ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಿಕೊಂಡರು. ಸ್ಥಳ ಮಹಜರು ವೇಳೆಯಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಮನೆಯಲ್ಲಿಯೇ ಇದ್ದರು. ರೇವಣ್ಣ ಪರ ವಕೀಲರು, ಜೆಡಿಎಸ್ ನಾಯಕರು ಸ್ಥಳದಲ್ಲಿ ಹಾಜರಿದ್ದರು.

Shwetha M