ಈ ರಸ್ತೆಯಲ್ಲಿ ಇನ್ನುಮುಂದೆ ಅತಿವೇಗವಾಗಿ ವಾಹನ ಚಲಾಯಿಸುವಂತಿಲ್ಲ! – ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದೆ ಬೀಳುತ್ತೆ ದಂಡ

ಈ ರಸ್ತೆಯಲ್ಲಿ ಇನ್ನುಮುಂದೆ ಅತಿವೇಗವಾಗಿ ವಾಹನ ಚಲಾಯಿಸುವಂತಿಲ್ಲ! – ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದೆ ಬೀಳುತ್ತೆ ದಂಡ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಎಲ್ಲೆಂದರಲ್ಲಿ ನುಗ್ಗಿಸಿಕೊಂಡು ವೇಗವಾಗಿ ವಾಹನ ಚಲಾಯಿಸುತ್ತಾರೆ. ಇದ್ರಿಂದಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಇನ್ನು ಮುಂದೆ ಅತಿ ವೇಗವಾಗಿ ವಾಹನ ಚಲಾಯಿಸಿದರೆ ಸಂಕಷ್ಟ ಕಾದಿದೆ. ಈ ರಸ್ತೆಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದ ಕಾರಣ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ಸಂಚಾರ ಪೊಲೀಸರು ಚಾಲಕರ ಅತಿವೇಗಕ್ಕೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

ಇದನ್ನೂ ಓದಿ: ಗಂಡ 5 ರೂಪಾಯಿ ಕುರ್ಕುರೆ ತಂದಿಲ್ಲ ಅಂತಾ ಕೋರ್ಟ್‌ ಮೆಟ್ಟಿಲೇರಿದ ಮಹಿಳೆ!

ಹೌದು, ಅಪಘಾತಗಳನ್ನು ತಡೆಗಟ್ಟಲು ವೇಗದ ಮಿತಿ ಹೇರುವ ನಿರ್ಧಾರ ಕೈಗೊಳ್ಳಲಾಗಿದೆ. ಅತಿವೇಗದ ಚಾಲನೆ ಪತ್ತೆಹಚ್ಚಲು ಏರ್​​​ಪೋರ್ಟ್ ರಸ್ತೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಸ್ಪೀಡ್ ಲಿಮಿಟ್ ಮೀರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗಂಟೆಗೆ 80 ಕಿ.ಮೀ. ವೇಗದ ಮಿತಿ ಮೀರಿ ವಾಹನ ಚಲಾಯಿಸಿದರೆ ಅತಿವೇಗದ ಚಾಲನೆ ಪ್ರಕರಣ ದಾಖಲಿಸಿ ದಂಡ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ.

ಸಂಚಾರ ಪೊಲೀಸರ ಪ್ರಕಟಣೆಯಲ್ಲೇನಿದೆ?

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅದರಲ್ಲೂ ಮುಖ್ಯವಾಗಿ ಚಾಲಕರು / ವಾಹನ ಸವಾರರ ಅತಿವೇಗದ ಚಾಲನೆ ಈ ಅಪಘಾತಗಳು ಉಂಟಾಗುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರ ವಹಿಸುತ್ತಿರುವುದನ್ನು ಗಮನಿಸಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆಯನ್ನು ಪತ್ತೆ ಹಚ್ಚುವ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಈ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಅತಿವೇಗದ ಚಾಲನೆಯನ್ನು ಕಂಡು ಹಿಡಿಯುವ ಸಾಮರ್ಥ್ಯವನ್ನು ಹೊಂದಿವೆ ಎಂದು ಸಂಚಾರ ಪೊಲೀಸರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾನೂನಾತ್ಮಕವಾಗಿ ನಿಗದಿಪಡಿಸಲಾಗಿರುವ ಪ್ರತಿ ಗಂಟೆಗೆ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗುವುದು ಎಂದೂ ಸಂಚಾರ ಪೊಲೀಸರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shwetha M