ʼಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸುʼ! – ಶಾಲೆಗಳಲ್ಲೇ ಮತ್ತೊಂದು ವಿವಾದದ ಕಿಡಿ ಹಚ್ಚಿತಾ ರಾಜ್ಯ ಸರ್ಕಾರ?

ʼಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸುʼ! – ಶಾಲೆಗಳಲ್ಲೇ ಮತ್ತೊಂದು ವಿವಾದದ ಕಿಡಿ ಹಚ್ಚಿತಾ ರಾಜ್ಯ ಸರ್ಕಾರ?

ಶಾಲೆಗಳ ಬಾಗಿಲ ಬಳಿ ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ’ ಎಂಬ ಸಾಲುಗಳನ್ನು ಸಾಮಾನ್ಯವಾಗಿ ಹಾಕಲಾಗಿರುತ್ತದೆ. ಇದೀಗ ವಸತಿ ಶಾಲೆಗಳಲ್ಲಿ ಈ ಬರಹವನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ಈ ಘೋಷವಾಕ್ಯ ಬದಲು ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ ಎಂದು ಬದಲಾವಣೆ ಮಾಡಲಾಗಿದ್ದು, ಇದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಒಂಟಿ ಸಲಗದ ದಾಳಿಗೆ ಆಶಾಕಾರ್ಯಕರ್ತೆ ಸೇರಿ ಇಬ್ಬರು ಮಹಿಳೆಯರ ದಾರುಣ ಸಾವು – ಯಾವ ತಪ್ಪಿಗೆ ಈ ಸಾವಿನ ಶಿಕ್ಷೆ?

ಹೌದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಸಾಲುಗಳನ್ನು ಬದಲಾವಣೆ ಮಾಡಲಾಗಿದೆ. ಶಾಲೆಗಳ ಪ್ರವೇಶದ್ವಾರದಲ್ಲಿರುವ ಘೋಷವಾಕ್ಯ ಬದಲಾವಣೆ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎಂದ ಉದ್ದೇಶದಿಂದ ಬರೆಯಲಾಗಿದೆ ಎನ್ನಲಾಗಿದೆ.

ಈ ಕುರಿತು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಪ್ರತಿಕ್ರಿಯಿಸಿ, ಸರ್ಕಾರದ ಸುತ್ತೋಲೆ ಪ್ರಕಾರ ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೆÇೀಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ. ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ ಪೋಷಕರು ಧೈರ್ಯವಾಗಿ ಮಾತನಾಡಲಿ ಎನ್ನುವ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Shwetha M