‘ಕರ್ನಾಟಕದ ಮೇಲೆ ಮಹಾರಾಷ್ಟ್ರಕ್ಕಿಂತ ರಾಜ್ಯ ಸರ್ಕಾರಕ್ಕೇ ಹಗೆ ಹೆಚ್ಚಿದೆ’ – ಕಾಂಗ್ರೆಸ್

‘ಕರ್ನಾಟಕದ ಮೇಲೆ ಮಹಾರಾಷ್ಟ್ರಕ್ಕಿಂತ ರಾಜ್ಯ ಸರ್ಕಾರಕ್ಕೇ ಹಗೆ ಹೆಚ್ಚಿದೆ’ – ಕಾಂಗ್ರೆಸ್

ಬೆಂಗಳೂರು: ಬೆಳಗಾವಿ ಖಾಸಗಿ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಧ್ವಜ ಹಿಡಿದು ಕುಣಿಯುತ್ತಿದ್ದ ವೇಳೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ದೂರು ನೀಡಲು ಪೊಲೀಸರ ಬಳಿ ತೆರಳಿದಾಗ ಪೊಲೀಸರೂ ಈತನ ಮೇಲೆ ದರ್ಪ ತೋರಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಕರ್ನಾಟಕದ ಮೇಲೆ ಮಹಾರಾಷ್ಟ್ರ ಸರ್ಕಾರಕ್ಕಿಂತ ಬೊಮ್ಮಾಯಿ ಸರ್ಕಾರವೇ ಹೆಚ್ಚು ಹಗೆ ಸಾಧಿಸುತ್ತಿರುವಂತಿದೆ. ಕನ್ನಡದ ನೆಲದಲ್ಲಿ ಕನ್ನಡ ಧ್ವಜ ಹಿಡಿದ ವಿದ್ಯಾರ್ಥಿಗೆ ಕರ್ನಾಟಕದ ಪೊಲೀಸರೇ ಥಳಿಸಿದ್ದಾರೆ, ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಪೊಲೀಸರೇ ತೆಗೆದಿದ್ದಾರೆ. ಕನ್ನಡಿಗರ ಮೇಲೆ ದೌರ್ಜನ್ಯವೆಸಗಲು ಪೊಲೀಸರಿಗೆ ಸರ್ಕಾರವೇ ನಿರ್ದೇಶಿಸಿದೆಯೇ? ಎಂದು ಕಿಡಿಕಾರಿದೆ.

ಇದನ್ನೂ ಓದಿ: ಜೆಡಿಎಸ್ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ದಲಿತರಿಗೆ ಸಿಎಂ ಪಟ್ಟ- ಕುಮಾರಸ್ವಾಮಿ ಘೋಷಣೆ

ಅಲ್ಲದೇ ಮಹಾರಾಷ್ಟ್ರದ ಗಡಿ ಕ್ಯಾತೆ ವಿಚಾರದಲ್ಲಿ ಏಕೆ ಎಲ್ಲಾ ಸಚಿವರ ಬಾಯಿ ಬಂದ್ ಆಗಿದೆ? ಅಲ್ಲೂ ಬಿಜೆಪಿ, ಇಲ್ಲೂ ಬಿಜೆಪಿ ಎರಡೂ ಸರ್ಕಾರಗಳು ಸೇರಿಕೊಂಡು ಕನ್ನಡಿಗರನ್ನು ವಂಚಿಸುತ್ತಿವೆ. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವಾಗುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದಿದೆ. ಅಲ್ಲೂ ನಮ್ಮದೇ ಸರ್ಕಾರ ಎಂಬ ಮಮಕಾರವೇ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.

suddiyaana