ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಹಾವಳಿ – 5 ನಿಮಿಷದಲ್ಲಿ 30 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ!

ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಹಾವಳಿ – 5 ನಿಮಿಷದಲ್ಲಿ 30 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದೆ. ಕುಡಿತ ಮತ್ತಿನಲ್ಲಿ ಪುಂಡರು ರಸ್ತೆ ಬದಿಯಲ್ಲಿ ನಿಂತಿರುವ ವಾಹನಗಳ ಗಾಜನ್ನು ಪುಡಿಗಟ್ಟಿ ಜನರಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ. ಲಗ್ಗೆರೆ ಬಳಿ ಸುಮಾರು 30 ಕಾರುಗಳ ಗಾಜನ್ನು ಪುಡಿ ಮಾಡಿದ್ದ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದ್ದಾರೆ.

ಇದನ್ನೂ ಓದಿ:ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ! – ಕುಮಾರಸ್ವಾಮಿ ಕಿಡಿ

ಏನಿದು ಘಟನೆ?

ಕಳೆದ ಶುಕ್ರವಾರ ನಸುಕಿನ ಜಾವ 2-3 ಗಂಟೆಯ ವೇಳೆಗೆ ಪುಂಡರ ಗುಂಪೊಂದು ಕುಡಿದ ಮತ್ತಿನಲ್ಲಿ ಲಗ್ಗೆರೆಯ ರಾಜೀವ್ ಗಾಂಧಿ ನಗರದಲ್ಲಿ ಲಾಂಗ್‌, ಮಚ್ಚಿನಿಂದ ವಾಹನಗಳನ್ನು ಜಖಂ ಮಾಡಿತ್ತು. ಸುಮಾರು 30 ಕ್ಕೂ ಹೆಚ್ಚು ವಾಹನಗಳ ಮೇಲೆ ಪುಂಡರು ಲಾಂಗ್ ಬೀಸಿದ್ದಾರೆ. ಮುಖಕ್ಕೆ ಮಾಸ್ಕ್‌ ಧರಿಸಿಕೊಂಡು ಈ ಕೃತ್ಯ ಎಸಗಿದ್ದರು. ಪುಂಡರ ಕಿತಾಪತಿಗೆ 12 ಕಾರು, 1 ಆಟೋ, 4 ಟೆಂಪೋಗಳ ಗ್ಲಾಸ್‌ ಪುಡಿ ಪುಡಿಯಾಗಿದೆ. ಕೇವಲ 5 ನಿಮಿಷದಲ್ಲೇ 30 ಕ್ಕೂ ಹೆಚ್ಚು ವಾಹನಗಳ ಮೇಲೆ ದಾಳಿ ಮಾಡಿದ್ದರು. ಬಳಿಕ ಜನ ಹೊರಗೆ ಬರುತ್ತಿದ್ದಂತೆ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದರು. ಇದೀಗ ರಾಜಗೋಪಾಲನಗರ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳನ್ನು ಕಳ್ಳ ಮಣಿ ಹಾಗೂ ರಾಬರಿ ಸೋಮನ ಗ್ಯಾಂಗ್‍ನ ಸಹಚರರು ಎಂದು ತಿಳಿದು ಬಂದಿದೆ.

ಆರೋಪಿಗಳು ಗಾಂಜಾ ಹಾಗು ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಕೃತ್ಯದ ಬಳಿಕ ಆರೋಪಿಗಳು ಬೇರೆ ಬೇರೆಯಾಗಿ ತಲೆ ಮರೆಸಿಕೊಂಡಿದ್ದರು. ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Shwetha M