ಕಾರಿನಲ್ಲಿ ಎಸಿ ಹಾಕಿ ಮಲಗೋ ಮುನ್ನ ಎಚ್ಚರ! – ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

ಕಾರಿನಲ್ಲಿ ಎಸಿ ಹಾಕಿ ನಿದ್ದೆಗೆ ಜಾರುವವರೇ ಎಚ್ಚರ.. ಸ್ವಲ್ಪ ಎಚ್ಚರ ತಪ್ಪಿದ್ರೂ ಕೂಡ ಶಿವನ ಪಾದ ಸೋರೋದು ಗ್ಯಾರಂಟಿ.. ಇಲ್ಲೊಬ್ಬ ವ್ಯಕ್ತಿ ಕಾರಿನಲ್ಲಿ ಎಸಿ ಹಾಕಿ ರಾತ್ರಿ ನಿದ್ದೆಗೆ ಜಾರಿದ್ದು, ಬೆಳಗಾಗೋದ್ರೊಳಗೆ ಶವವಾಗಿ ಬಿಟ್ಟಿದ್ದಾನೆ.
ಇದನ್ನೂ ಓದಿ: ಸಿಎಂಗೆ ಕಂಟಕವಾಯ್ತು ಮುಡಾ ಹಗರಣ – ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ
ಈ ಘಟನೆ ಮಣಿಪಾಲದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ನಿವಾಸಿ 32 ವರ್ಷದ ಗುರುರಾಜ್ ಮೃತ ವ್ಯಕ್ತಿ. ತಂದೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಗ ಆಸ್ಪತ್ರೆ ಹೊರಗೆ ಪ್ರಾಣ ಬಿಟ್ಟಿದ್ದಾನೆ.
ಏನಿದು ಘಟನೆ?
ಗುರುರಾಜ್ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಶುಕ್ರವಾರ ಅಣ್ಣನ ಸ್ನೇಹಿತನೊಂದಿಗೆ ತನ್ನ ತಂದೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಗ್ಲಾಸ್ ಮುಚ್ಚಿ ಎಸಿ ಹಾಕಿ ಮಲಗಿದ್ದಾರೆ. ಬೆಳಗಾಗುವಷ್ಟರಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ವರದಿ ಬಳಿಕವಷ್ಟೇ ತಿಳಿಯಲಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.