ಚಂದ್ರನ ಮೇಲೆ ಪ್ರಜ್ಞಾನ್‌ ಪರಾಕ್ರಮ.. ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ  – ಪ್ರಧಾನಿ ಮೋದಿ
ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಚಂದ್ರನ ಮೇಲೆ ಪ್ರಜ್ಞಾನ್‌ ಪರಾಕ್ರಮ.. ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ  – ಪ್ರಧಾನಿ ಮೋದಿಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಬೆಂಗಳೂರು: ಚಂದ್ರಯಾನ – 3 ಯೋಜನೆ ಯಶಸ್ವಿಯಾದ ಹಿನ್ನೆಲೆ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸೋಮನಾಥನ್​ ಅವರನ್ನು ಅಪ್ಪಿಕೊಂಡ ಪ್ರಧಾನಿ ಮೋದಿ ಬೆನ್ನು ತಟ್ಟಿ ಶಹಬ್ಬಾಸ್​ ಗಿರಿ ನೀಡಿದರು.

ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಗ್ರೀಸ್​ನ ರಾಜಧಾನಿ ಅಥೇನ್ಸ್​ನಿಂದ ಹೊರಟು ಶನಿವಾರ ಬೆಳಗ್ಗೆ ಬೆಂಗಳೂರಿಗೆ ಬಂದಿಳಿದರು. ಬಳಿಕ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿ, ಚಂದ್ರನ ಮೇಲೆ ಪ್ರಜ್ಞಾನ್‌ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ. ಇದಕ್ಕೆ ಕಾರಣ ನೀವು. ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ ಎಂದು ಹೇಳಿದರು.

ಇದನ್ನೂ ಓದಿ: ಝಗಮಗಿಸಲಿದೆ ಸಾಂಸ್ಕೃತಿಕ ನಗರಿ ಮೈಸೂರು – 135 ಕಿ.ಮೀ ರಸ್ತೆಯ 119 ವೃತ್ತಗಳಲ್ಲಿ ದೀಪಾಲಂಕಾರಕ್ಕೆ ಸಿದ್ಧತೆ

ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ ಎಂದು ಮೋದಿ ಹೇಳಿದರು.

ನಂತರ ಇಸ್ರೋ ಕಡೆ ಹೊರಟ ಪ್ರಧಾನಿ ಮೋದಿಗೆ ದಾರಿಯುದ್ದಕ್ಕೂ ರಸ್ತೆಯ ಎರಡೂ ಬದಿಯಲ್ಲಿ ನಿಂತಿದ್ದ ಸಾವಿರಾರು ಜನರು ಜೈಕಾರ ಕೂಗಿದರು. ಜಾಲಹಳ್ಳಿ ಜಂಕ್ಷನ್​ಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಜೈಕಾರ ಕೂಗಿ, ಹೂಮಳೆ ಸುರಿದು ಪ್ರಧಾನಿಗೆ ಅದ್ಧೂರಿ ಸ್ವಾಗತ ಕೋರಿದರು. ಇಸ್ರೋ ಕಚೇರಿಗೆ ಆಗಮಿಸುತ್ತಿದ್ದಂತೆ ಕಚೇರಿ ಒಳಗೆ ತೆರಳುವ ಮುನ್ನ ಅಲ್ಲಿ ನೆರೆದಿದ್ದ ಜನರತ್ತ ಕೈಬೀಸಿ, ನಂತರ ಇಸ್ರೋ ಕಚೇರಿಯ ಒಳಗೆ ಪ್ರಧಾನಿ ಮೋದಿ ತೆರಳಿದರು.

suddiyaana