ಮೂರನೇ ಶನಿವಾರ ನೋ ಬ್ಯಾಗ್‌ ಡೇ – ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಮೂರನೇ ಶನಿವಾರ ನೋ ಬ್ಯಾಗ್‌ ಡೇ – ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು: 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಇನ್ನು ಮುಂದೆ 3 ನೇ ಶನಿವಾರ ಶಾಲೆಗೆ ಬ್ಯಾಗ್‌ ತೆಗೆದುಕೊಂಡು ಹೋಗುವಂತಿಲ್ಲ. ತಿಂಗಳ ಪ್ರತಿ ಮೂರನೇ ಶನಿವಾರ ನೋ ಬ್ಯಾಗ್‌ ಡೇ ಆಚರಣೆಗೆ ನಿರ್ಧರಿಸಿದ್ದು, ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ.

ರಾಜ್ಯದ ಶಾಲಾ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡುವ ಸಲುವಾಗಿ ಸಂಭ್ರಮ ಶನಿವಾರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಿಸಲಾಗುತ್ತದೆ. ಶಾಲಾ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೇ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳ ಮೂರನೇ ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.

ಇದನ್ನೂ ಓದಿ: ರಾಜಕೀಯ ತಿರುವು ಪಡೆದ KSRTC ಚಾಲಕನ ಆತ್ಮಹತ್ಯೆ ಕೇಸ್ – ದ್ವೇಷದ ರಾಜಕಾರಣ ಎಂದು ಹೆಚ್ ಡಿಕೆ ವಾಗ್ದಾಳಿ

2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಶಿಕ್ಷಕರಿಗೆ ತಿಳಿಸಲಾಗಿದೆ. ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಶಿಕ್ಷಣ ಇಲಾಖೆ ಸಿದ್ಧಪಡಿಸಲಾಗಿದೆ.

ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಆರ್ ಪಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳುವಿಕೆಯನ್ನು ಅಪೇಕ್ಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

suddiyaana