ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂದು ಹೈಟೆನ್ಷನ್‌ ತಂತಿ ಮುಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂದು ಹೈಟೆನ್ಷನ್‌ ತಂತಿ ಮುಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ವಯಸ್ಸಾಯ್ತು.. ಮದುವೆಯಾಗಲು ಹುಡುಗಿ ಸಿಗ್ತಿಲ್ಲ ಅನ್ನೋದು ಈಗಿನ ಯುವಕರ ಚಿಂತೆ. ಇದೀಗ ಇಲ್ಲೊಬ್ಬ ಯುವಕ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಅಂತಾ ಹೈಟೆನ್ಷನ್‌ ತಂತಿ ಮುಟ್ಟಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ದುಬಾರಿಯಾಯ್ತು ಆರ್‌ಸಿಬಿ ಮ್ಯಾಚ್‌ ಟಿಕೆಟ್‌ ದರ! – ಕನಿಷ್ಠ, ಗರಿಷ್ಠ ಬೆಲೆ ಎಷ್ಟು ಗೊತ್ತಾ?

ಈ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಟಿಸಿ ಹುಂಡಿ ಗ್ರಾಮದಲ್ಲಿ  ನಡೆದಿದೆ. ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ (27) ಆತ್ಮಹತ್ಯೆಗೆ ಶರಣಾದ ಯುವಕ. ಈತ ಮದುವೆಗೆ ಹುಡುಗಿ ಸಿಗುತ್ತಿಲ್ಲ ಎಂದು ಖಿನ್ನನಾಗಿದ್ದ. ಮದ್ಯದ ಗೀಳಿಗೆ ದಾಸನಾಗಿದ್ದ ಈತ ಕೆಲ ತಿಂಗಳ ಹಿಂದೆ ಮದ್ಯೆ ಸೇವನೆ ಬಿಟ್ಟಿದ್ದ. ಬಳಿಕ, ಈತನಿಗೆ ಹುಡುಗಿ ಹುಡುಕಲಾಗುತ್ತಿತ್ತು.

ಈ ಮಧ್ಯೆ, ಮನೆ ಚಿಕ್ಕದು, ಜಮೀನಿಲ್ಲ ಎಂಬ ಕಾರಣಕ್ಕೆ 2 ಸಂಬಂಧ ಮುರಿದು ಬಿದ್ದವು. ಇದರಿಂದ ಆತ ಮತ್ತಷ್ಟು ವಿಚಲಿತನಾಗಿದ್ದ. ಮಂಗಳವಾರ ಬೆಳಗ್ಗೆ ಆತ ಹೈಟೆನ್ಷನ್ ಕಂಬ ಏರಿರುವ ವಿಚಾರವನ್ನು ಸ್ಥಳೀಯರು ಆತನ ತಾಯಿಗೆ ತಿಳಿಸಿದರು. ತಾಯಿ ಕಣ್ಣೀರು ಹಾಕುತ್ತಾ ಕೆಳಗಿಳಿ ಎಂದು ಪರಿಪರಿಯಾಗಿ ಕೂಗಿದರು. ಆದರೆ, ಮಾತು ಕೇಳದ ಆತ ಕೈ ಮೇಲೆತ್ತಿ ತಂತಿ ಮುಟ್ಟಿ, ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಕಂಬದಿಂದ ನೇತಾಡುತ್ತಿದ್ದ ಯುವಕನ ಶವ ಇಳಿಸಿ, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Shwetha M