‘ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ’ – ಹೆಚ್.ಡಿ ಕುಮಾರಸ್ವಾಮಿ

‘ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ’ – ಹೆಚ್.ಡಿ ಕುಮಾರಸ್ವಾಮಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಿಟ್ಟ ಬಜರಂಗದಳ ಬ್ಯಾನ್ ಬಾಣ ಬಿಜೆಪಿಗೆ ಅಸ್ತ್ರವಾಗಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ, ಕಾಂಗ್ರೆಸ್ ಮೇಲೆ ಮುಗಿಬಿದ್ದಿದೆ. ಇಬ್ಬರ ಜಗಳದ ಮಧ್ಯೆ, ಜೆಡಿಎಸ್ ತನ್ನ ಪಕ್ಷದ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುತ್ತಿದೆ. ಅದರಲ್ಲೂ ಈ ಬಾರಿಯ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ:  ‘ಬಜರಂಗಿ’ ಸಂಘರ್ಷ – ಕಾಂಗ್ರೆಸ್ ಪ್ರಣಾಳಿಕೆಯನ್ನು ವೇದಿಕೆಯಲ್ಲೇ ಸುಟ್ಟು ಹಾಕಿದ ಈಶ್ವರಪ್ಪ

ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್ ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂಪಾಯಿಯಾದರೂ ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲಂಚದ ಹಣವನ್ನು ಕೈಯಲ್ಲಿ ಗೋರುತ್ತಿದ್ದರು. ಆದರೆ ಬಿಜೆಪಿಯವರು ಜೆಸಿಬಿ, ಇಟಾಚಿ ಹಾಕಿಕೊಂಡು ಗೋರುತ್ತಿದ್ದಾರೆ. ಸಾಕು, ರಾಜ್ಯದ ಜನರೇ ಅವರಿಗೆ ಇನ್ನೆಷ್ಟು ಗೋರಲು ಬಿಡುತ್ತೀರಾ. ನಮಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ನಡೆಸಲು ಅವಕಾಶ ಕೊಡಿ ಎಂದು ಹೆಚ್‌.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

suddiyaana