ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಇಬ್ಬರು ಹೆಂಡತಿ ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು!

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಇಬ್ಬರು ಹೆಂಡತಿ ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು!

ದೇಶದಲ್ಲಿ ಲೋಕಸಭಾ ಚುನಾವಣೆಯ 3 ಹಂತದ ಮತದಾನ ಈಗಾಗಲೇ ಮುಗಿದಿದೆ. ಇದೀಗ ಉಳಿದ ಹಂತದ ಮತದಾನಕ್ಕಾಗಿ ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಾ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಕಾಂಗ್ರೆಸ್‌ ನಾಯಕರೊಬ್ಬರು ಕಾಂಗ್ರೆಸ್‌ ಅಧಿಕಾರಕ್ಕೆ ಇಬ್ಬರು ಹೆಂತಿಯರು ಇರುವವಗೆ 2 ಲಕ್ಷ ರೂ. ಆರ್ಥಿಕ ನೆರವು ನೀಡೋದಾಗಿ ಹೇಳಿ ವಿವಾದ ಹುಟ್ಟು ಹಾಕಿದ್ದಾರೆ.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ ಪ್ರಕರಣ –  ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಿದ ಬಿಬಿಎಂಪಿ!

ಮಧ್ಯಪ್ರದೇಶದ ರತ್ಲಾಮ್‌ನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಕಾಂತಿಲಾಲ್ ಭೂರಿಯಾ ಈ ಹೊಸ ವಿವಾದ ಹುಟ್ಟುಹಾಕಿದ್ದಾರೆ. ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿರುವ ವೇಳೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದು ನಮ್ಮ ಸರಕಾರ ರಚನೆಯಾದರೆ ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂಪಾಯಿ ನೀಡುತ್ತೇವೆ. ಒಂದಷ್ಟೇ ಅಲ್ಲ, ಒಂದು ವೇಳೆ ಇಬ್ಬರು ಪತ್ನಿಯರಿದ್ದರೆ ಇಬ್ಬರಿಗೂ ತಲಾ ಒಂದು ಲಕ್ಷದಂತೆ 2 ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.

ಕಾಂತಿಲಾಲ್‌ ಹೇಳಿಕೆ ಈಗ ಭಾರಿ ವಿವಾದ ಹುಟ್ಟುಹಾಕಿದೆ. ಇದು ಪಕ್ಷದ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಕಾಂತಿಲಾಲ್‌ ಹೇಳಿಕೆ ಆಡಳಿತಾರೂಢ ಬಿಜೆಪಿಗೆ ಅಸ್ತ್ರವಾಗಿದ್ದು, ನಾಯಕನ ವಿರುದ್ಧ ಚುನಾವಣಾ ಆಯೋಗದಿಂದ ಕ್ರಮ ಕೈಗೊಳ್ಳುವಂತೆ ಕೋರಿದೆ.

ಭುರಿಯಾ ಅವರು ಮಧ್ಯಪ್ರದೇಶದ ಅರಣ್ಯ ಸಚಿವ ನಗರ್ ಸಿಂಗ್ ಚೌಹಾಣ್ ಅವರ ಪತ್ನಿ ಅನಿತಾ ಚೌಹಾಣ್ ವಿರುದ್ಧ ರತ್ಲಾಮ್‌ನಲ್ಲಿ ಕಣಕ್ಕಿಳಿದಿದ್ದಾರೆ. ಮೇ 13 ರಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ರತ್ಲಾಮ್‌ನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಫಲಿತಾಂಶಗಳು ಜೂನ್ 4 ರಂದು ಪ್ರಕಟವಾಗಲಿದೆ.

Shwetha M