ಶಾಲೆಗಳು ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಕರೆ ವರದಿಯಾಗುತ್ತಲೇ ಇದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿತ್ತು. ಇದೀಗ ಮತ್ತೊಂದು ಬಾಂಬ್ ಬೆದರಿಕೆ ಬಂದಿದೆ. ಕರ್ನಾಟಕದ ರಾಜಭವನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – ಎರಡು ದಿನಗಳ ಅಂತರದಲ್ಲೇ ಮತ್ತೆ ನಡುಗಿದ ಭೂಮಿ!
ಸೋಮವಾರ ತಡರಾತ್ರಿ ಬೆಂಗಳೂರಿನ ಕರ್ನಾಟಕದ ರಾಜಭವನಕ್ಕೆ ಬಾಂಬ್ ಬೆದರಿಕೆಯ ಕುರಿತು ಅಪರಿಚಿತ ಕರೆಯೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಹುಸಿ ಕರೆ ಬಂದ ಬೆನ್ನಲ್ಲೇ ತಕ್ಷಣ ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಕಳುಹಿಸಿ, ಪರಿಶೀಲನೆ ನಡೆಸಿದ್ದಾರೆ. ತನಿಖೆ ವೇಳೆ ರಾಜಭವನದ ಆವರಣದಲ್ಲಿ ಏನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದೊಂದು ಹುಸಿ ಕರೆ. ನಾವು ಎಫ್‌ಐಆರ್ ದಾಖಲಿಸುತ್ತೇವೆ. ನಿನ್ನೆ ಮಧ್ಯರಾತ್ರಿ ಅಪರಿಚಿತ ಸಂಖ್ಯೆಯಿಂದ ನಮ್ಮ ಕಂಟ್ರೋಲ್ ರೂಂಗೆ ರಾಜಭವನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕರೆ ಬಂದಿದೆ. ನಾವು ಮಂಗಳವಾರ ಮತ್ತೊಂದು ಬಾರಿ ಶೋಧ ನಡೆಸುತ್ತೇವೆ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಇದೇ ರೀತಿಯ ಬಾಂಬ್ ಬೆದರಿಕೆ ಕರೆ ಬೆಂಗಳೂರಿನಾದ್ಯಂತ ಸುಮಾರು 60 ಕ್ಕೂ ಶಾಲೆಗಳಿಗೆ ಅನಾಮಧೇಯ ಇಮೇಲ್‌ಗಳ ಮೂಲಕ ಬಂದಿತ್ತು. ಈ ಘಟನೆ ನಡೆದು 10 ದಿನಗಳು ಕೂಡ ಕಳೆದಿಲ್ಲ. ಅಷ್ಟರೊಳಗೆ ಇದೇ ರೀತಿಯ ಮತ್ತೊಂದು ಬೆದರಿಕೆ ಕರೆ ಮುನ್ನೆಲೆಗೆ ಬಂದಿದೆ.