20 ಕೋಟಿ ಕೊಡಿ.. ಇಲ್ಲದಿದ್ದರೆ ಕೊಲೆ ಮಾಡ್ತೀವಿ – ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

20 ಕೋಟಿ ಕೊಡಿ.. ಇಲ್ಲದಿದ್ದರೆ ಕೊಲೆ ಮಾಡ್ತೀವಿ – ಮುಕೇಶ್ ಅಂಬಾನಿಗೆ ಜೀವ ಬೆದರಿಕೆ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೀವು ನಮಗೆ 20 ಕೋಟಿ ರೂಪಾಯಿ ನೀಡಬೇಕು. ಹಣ ನೀಡದಿದ್ದರೆ ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ ಗಳನ್ನು ಹೊಂದಿದ್ದೇವೆ ಎಂದು ಬೆದರಿಕೆ ಹಾಕಿದ್ದಾರೆ. ಇಮೇಲ್ ಮೂಲಕ ಬೆದರಿಕೆ ಹಾಕಿರುವ ವ್ಯಕ್ತಿ, 20 ಕೋಟಿ ಕೊಡಬೇಕು ಎಂಬುದಾಗಿ ಇಮೇಲ್‌ ಮುಖಾಂತರ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ. ಈ ಹಿನ್ನೆಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ತಿಮ್ಮಪ್ಪನ ಭಕ್ತರಿಗೆ ಮತ್ತೆ ಕರಡಿ, ಚಿರತೆ ಕಾಟ! – ಗುಂಪು ಗುಂಪಾಗಿ ತೆರಳಲು ಟಿಟಿಡಿ ಮನವಿ

ಅಕ್ಟೋಬರ್ 27 ರಂದು ಶಾದಾಬ್ ಖಾನ್ ಎಂಬ ಹೆಸರಿನಿಂದ ಈ ಬೆದರಿಕೆ ಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಅಂಬಾನಿ ನಿವಾಸ ಆಂಟಿಲಿಯಾದಲ್ಲಿ ಭದ್ರತಾ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಸದ್ಯ ತನಿಖೆ ಮುಂದುವರಿದಿದೆ.

ಕಳೆದ ವರ್ಷ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಅನಾಮಧೇಯ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ಕುಟುಂಬದ ನಿವಾಸ ಆಂಟಿಲಿಯಾದ ಜೊತೆಗೆ ಎಚ್‍ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿತ್ತು.

Shwetha M