ಪ್ರಧಾನಿ ಮೋದಿ ವಿದೇಶ ಪ್ರವಾಸ ಬೆನ್ನಲ್ಲೇ ಬೆದರಿಕೆ ಕರೆ – ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ

ಪ್ರಧಾನಿ ಮೋದಿ ವಿದೇಶ ಪ್ರವಾಸ ಬೆನ್ನಲ್ಲೇ ಬೆದರಿಕೆ ಕರೆ – ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಈಗ ವಿದೇಶ ಪ್ರವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ದಾಳಿ ನಡೆಸೋದಾಗಿ ಉಗ್ರರು ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಪ್ರಧಾನ ಅರ್ಚಕರು ನಿಧನ – ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಸಾ*ವು

ಈ ಬಗ್ಗೆ ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ಫ್ರಾನ್ಸ್, ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಈ ಬೆದರಿಕೆ ಬಂದಿತ್ತು. ಪ್ರಧಾನಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂಬ ಎಚ್ಚರಿಕೆಯ ಕರೆ ಮುಂಬೈ ಪೊಲೀಸರಿಗೆ ಬಂದಿತ್ತು. ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು.  ಮಾಹಿತಿಯ ಗಂಭೀರ ಸ್ವರೂಪವನ್ನು ಪರಿಗಣಿಸಿ, ಪೊಲೀಸರು ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿ ಅವರ ವಿಮಾನದ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದ ನಂತರ, ಭದ್ರತಾ ಪಡೆಗಳ ತಂಡಗಳು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪ್ರಾರಂಭಿಸಿದೆ. ಕರೆ ಮಾಡುತ್ತಿರುವ ವ್ಯಕ್ತಿ ಯಾರೆಂದು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿದ್ದಾರೆ. ಫೆಬ್ರವರಿ 12 ರಿಂದ 14 ರವರೆಗೆ ಪ್ರಧಾನಿ ಮೋದಿ ಫ್ರಾನ್ಸ್‌ನಲ್ಲಿ ನೆಲೆಸಿರುವ ಮೋದಿ ಇಂದು ಅಮೆರಿಕಕ್ಕೆ ತೆರಳಲಿದ್ದಾರೆ. ಈ ಸಮಯದಲ್ಲಿ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ.

Shwetha M

Leave a Reply

Your email address will not be published. Required fields are marked *