ರಾಜ್ಯದಲ್ಲಿ ಮೂರು, ರಾಜಧಾನಿಯಲ್ಲಿ ಐದು ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮೂರು, ರಾಜಧಾನಿಯಲ್ಲಿ ಐದು ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಬೆಂಗಳೂರು ನಗರದಲ್ಲಿ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:  ಭಾರತದ ಕೊನೆಯ ಹಳ್ಳಿಯಾಗಿದ್ದ ‘ಮಾಣಾ’ ಈಗ ಭಾರತದ ಪ್ರಥಮ ಗ್ರಾಮ!

ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದ್ದು, ಚಾಮರಾಜನಗರ, ಚಿಕ್ಕಮಗಳೂರು ಕೊಡಗು, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರು ನಗರದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬುಧವಾರ ದಕ್ಷಿಣ ಒಳನಾಡಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡುಗು, ಮಂಡ್ಯ, ಚಿಕ್ಕಬಳ್ಳಪುರ, ಚಿಕ್ಕಮಗಳೂರು, ಮೈಸೂರು, ರಾಮಾನಗರ, ಕೋಲಾರದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಚಾಮರಾಜನಗರ, ಚಿಕ್ಕಮಗಳೂರು ಕೊಡಗು, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

suddiyaana