ಹಾವೇರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ -ಭೀಕರ ಅಪಘಾತದಲ್ಲಿ ಐವರು ಸಾ*ವು!

ಹಾವೇರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ -ಭೀಕರ ಅಪಘಾತದಲ್ಲಿ ಐವರು ಸಾ*ವು!

ಹಾವೇರಿಯಲ್ಲಿ ಭೀಕರ ಅಪಘಾತ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ   ಗಾಯಗೊಂಡಿದ್ದ ಮೂವರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.    ಹಾವೇರಿ  ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ  ಈ ಘಟನೆ ನಡೆದಿದೆ.

ಇದನ್ನೂ ಓದಿ:  ವರಮಹಾಲಕ್ಷ್ಮಿ ಹಬ್ಬದ ಸಿದ್ಧತೆ ಹೇಗಿರಬೇಕು? – ಲಕ್ಷ್ಮಿಯನ್ನ ಹೇಗೆ ಪೂಜೆಸಬೇಕು ಗೊತ್ತಾ?

ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ. ಇನ್ನೂ ಈ  ಅಪಘಾತದಲ್ಲಿ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ರು. ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಚಳಗೇರಿ ಟೋಲ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಮಾಹಿತಿ ತಿಳಿದು ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Kishor KV

One thought on “ಹಾವೇರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ -ಭೀಕರ ಅಪಘಾತದಲ್ಲಿ ಐವರು ಸಾ*ವು!

Leave a Reply

Your email address will not be published. Required fields are marked *