ಲಾರಿ ಮತ್ತು ಬೈಕ್ ಡಿಕ್ಕಿ – ಗಂಡ, ಹೆಂಡತಿ, ಮಗು ಸ್ಥಳದಲ್ಲೇ ಸಾ*ವು

ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಗಿರೇಪ್ಪಾ, ಮಂಜುಳಾ ಹಾಗೂ ಆರಾಧ್ಯ ಒಂದೇ ಬೈಕ್ನಲ್ಲಿ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಲ್ಲಿ ಗಂಡ-ಹೆಂಡ್ತಿ ಹಾಗೂ ಮಗಳು ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಹಾರೂಗೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬಸ್ ಹರಿದು 4 ವರ್ಷದಲ್ಲಿ ಸಾ* ವು
ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದಲ್ಲಿ ನಡೆದಿದೆ. ಪುನೀತ್ ಮೃತ ಮಗು. ಗಾಜರಕೋಟ ಗ್ರಾಮದ ವಿಸ್ಡಮ್ ಶಾಲೆಯ ವಿದ್ಯಾರ್ಥಿ ಪುನೀತ್ ನಿನ್ನೆ (ಫೆಬ್ರವರಿ 17) ಬಸ್ನಿಂದ ಕೆಳಗೆ ಇಳಿಯುತ್ತಿದ್ದಂತೆ ಚಾಲಕ ರಿವರ್ಸ್ ತೆಗೆದುಕೊಂಡಿದ್ದಾನೆ. ಆಗ ಬಸ್ ಪುನೀತ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದರು. ಬಸ್ ಡ್ರೈವರ್ಗೆ ಜೀವಾವಧಿ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಬಳಿಕ ಪೊಲೀಸರ ಮನವೊಲಿಕೆಯಿಂದ ಪ್ರತಿಭಟನೆ ಕೈಬಿಟ್ಟರು.

ನೋಡಿರಿ

