ಪೆಟ್ರೋಲ್, ಡೀಸೆಲ್‌ ಆಯ್ತು.. ಈಗ ಖಾಸಗಿ ಬಸ್ ದರ ಏರಿಕೆ! – ಶೇ.20-30ರಷ್ಟು ಟಿಕೆಟ್‌ ದರ ಹೆಚ್ಚಳ!

ಪೆಟ್ರೋಲ್, ಡೀಸೆಲ್‌ ಆಯ್ತು.. ಈಗ ಖಾಸಗಿ ಬಸ್ ದರ ಏರಿಕೆ! – ಶೇ.20-30ರಷ್ಟು ಟಿಕೆಟ್‌ ದರ ಹೆಚ್ಚಳ!

ಪೆಟ್ರೋಲ್‌, ಡೀಸೆಲ್‌ ದರ ಹಾಗೂ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯಿಂದಾಗಿ ಕಂಗೆಟ್ಟಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್‌ ಸುದ್ದಿಯಿದೆ. ಇದೀಗ ಖಾಸಗಿ ಬಸ್‌ ದರವೂ ಏರಿಕೆಯಾಗಿದೆ.

ಇದನ್ನೂ ಓದಿ: ಬೋಲ್ಡ್‌ ಬ್ಯೂಟಿಗೆ ಪೊಲೀಸ್‌ ಕಾಟ! – ಕೆಟ್ಟ ಕಮೆಂಟ್‌ ಮಾಡಿದ ವ್ಯಕ್ತಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದ ಚೈತ್ರಾ ಜೆ ಆಚಾರ್!

ಇನ್ನು ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಬಗ್ಗೆ ಇಂದು (ಮೇ 15) ಬೆಳಿಗ್ಗೆಯಷ್ಟೇ ತೈಲ ಕಂಪನಿಗಳು ಘೋಷಣೆ ಮಾಡಿದ್ದವು. ಪೆಟ್ರೋಲ್ ಹಾಗೂ ಡೀಸೆಲ್ ಎರಡೂ ಲೀಟರ್​​ಗೆ 3 ರೂಪಾಯಿಗೂ ಹೆಚ್ಚು ಏರಿಕೆ ಕಂಡಿತ್ತು. ಅದರ ಅನ್ವಯ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್​​ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್​​ಗೆ 3.12 ರೂಪಾಯಿ ಹೆಚ್ಚಳವಾಗಿತ್ತು. ಆ ಬೆನ್ನಲ್ಲೇ ದೇಶಾದ್ಯಂತ ಸಿಎನ್‌ಜಿ ದರವನ್ನೂ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಿರುವ ಬಗ್ಗೆ ಘೋಷಣೆಯಾಗಿತ್ತು. ಇದೀಗ ಖಾಸಗಿ ಬಸ್‌ ದರವೂ ಏರಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಖಾಸಗಿ ಬಸ್‌ ಟಿಕೆಟ್ ದರ ಏರಿಕೆಗೆ ತೀರ್ಮಾನಿಸಲಾಗಿದೆ. ಶೇ.20-30ರಷ್ಟು ದರ ಏರಿಕೆಯಾಗಲಿದ್ದು, ಬೆಲೆ ಏರಿಕೆ ಅಬ್ಬರದ ಪರಿಣಾಮ ಈಗಾಗಲೇ ಸೋತು ಸುಣ್ಣವಾಗಿರುವ ಜನರಿಗೆ ಇದರಿಂದ ಮತ್ತಷ್ಟು ಹೊರೆಯಾಗಲಿದೆ.

ಬಸ್​​ ಒಂದಕ್ಕೆ ಪ್ರತಿದಿನ ಕನಿಷ್ಠ 150 ಲೀಟರ್ ಡಿಸೇಲ್​​ ಹಾಕಿಸುತ್ತೇವೆ. ಇಂಧನ ಬೆಲೆಯಲ್ಲಿ 3 ರೂ. ಹೆಚ್ಚಳವಾಗಿರುವ ಕಾರಣ 450 ರೂಪಾಯಿ ಹೆಚ್ಚುವರಿಯಾಗಿ ನಮಗೆ ಹೊರೆಯಾಗಲಿದೆ. ಹೀಗಾಗಿ ಟಿಕೆಟ್​​ಗಳ ದರ ಏರಿಸೋದು ನಮಗೂ ಅನಿವಾರ್ಯವಾಗಿದೆ. ಇದರ ಪರಿಣಾಮ ಪ್ರಯಾಣಿಕರ ಮೇಲೆ ಉಂಟಾಗಲಿದೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ.

Shwetha M

Leave a Reply

Your email address will not be published. Required fields are marked *