ಟಿ20 ವಿಶ್ವಕಪ್ಗೆ ತಿಲಕ್ ವರ್ಮಾ ಡೌಟ್ – ಕಿವೀಸ್, ಲಂಕಾ ಸರಣಿಯಿಂದ ವಾಷಿಂಗ್ಟನ್ ಸುಂದರ್ ಕೂಡಾ OUT

ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಈ ವಿಶ್ವಕಪ್ ಟೂರ್ನಿ ಆಯೋಜಿಸಿದೆ. ಆದರೆ, ಟೀಮ್ ಇಂಡಿಯಾದಿಂದ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಇಬ್ಬರು ಆಟಗಾರರು ಮಹತ್ವದ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.
ಇದನ್ನೂ ಓದಿ:ನ್ಯೂಜಿಲೆಂಡ್ ವಿರುದ್ಧ ಎಡವಿದ ಗಿಲ್ ಪಡೆ – ಟೀಂ IND ಕೈ ಹಿಡಿಯಲಿಲ್ಲ ಕೆಎಲ್ ಶತಕ
ಟಿ20 ವಿಶ್ವಕಪ್ ಟೂರ್ನಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆಯಾಗಿರುವ ಎಡಗೈ ದಾಂಡಿಗ ತಿಲಕ್ ವರ್ಮಾ ಹೊರಗುಳಿಯಲಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂದು ಸಮಸ್ಯೆಗೆ ಒಳಗಾಗಿದ್ದ ತಿಲಕ್ ಆಸ್ಪತ್ರೆಗೆ ದಾಖಲಾಗಿದ್ದು, ನೋವಿನ ಸಮಸ್ಯೆಗೆ ಸರ್ಜರಿ ಮಾಡಿಸಿಕೊಂಡಿದ್ದಾರೆ. ಹೀಗಾಗಿ ತಿಲಕ್ ವರ್ಮಾ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಅತ್ತ ನ್ಯೂಝಿಲೆಂಡ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಟಿ20 ವಿಶ್ವಕಪ್ಗೆ ಸಜ್ಜಾಗಲಿದೆ. ಹೀಗಾಗಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಿಲಕ್ ವರ್ಮಾ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಪೆಕ್ಕೆಲುಬಿಗೆ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಕಿವೀಸ್ ವಿರುದ್ಧದ 2 ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅಲ್ಲದೆ ಮುಂಬರುವ ಟಿ20 ಸರಣಿಯಲ್ಲೂ ಸುಂದರ್ ಕಾಣಿಸಿಕೊಳ್ಳುವುದು ಡೌಟ್. ಅಂದರೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತಿಲಕ್ ವರ್ಮಾ ಹಾಗೂ ವಾಷಿಂಗ್ಟರ್ ಸುಂದರ್ ಕಣಕ್ಕಿಳಿಯುವುದು ಅನುಮಾನ.
ಈ ಇಬ್ಬರೂ ಆಟಗಾರರು ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಬೇಕಿತ್ತು. ಆದರೆ, ಇಂಜುರಿಯಿಂದಾಗಿ ಈ ಇಬ್ಬರು ಆಟಗಾರರು ತಂಡದಿಂದ ಹೊರಗುಳಿಯುತ್ತಾರಾ, ಇಲ್ಲವೇ ಅಷ್ಟರೊಳಗೆ ಫುಲ್ ಫಿಟ್ ಆಗಿ ತಂಡಕ್ಕೆ ಕಮ್ ಬ್ಯಾಕ್ ಆಗುತ್ತಾರಾ ಕಾದುನೋಡಬೇಕಿದೆ.

ನೋಡಿರಿ

