ದೇವರ ದರ್ಶನಕ್ಕೂ ಬಂತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್! – ಹೊಸ ವ್ಯವಸ್ಥೆಗೆ ಮುಂದಾದ TTD

ಇದು ಡಿಜಿಟಲ್ ಯುಗ.. ಎಲ್ಲಾ ಕೆಲಸಗಳನ್ನ ಆನ್‌ಲೈನ್‌ನಲ್ಲೇ ಮಾಡಿ ಮುಗಿಸ್ಬೋದು.. ಇದ್ರ ಸಾಲಿಗೆ ಈಗ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಸೇರ್ಕೊಂಡಿದೆ. ಈ ಅತ್ಯಾಧುನಿಕ ಕೃತಕ ಬುದ್ಧಿಮತ್ತೆಯ ಚಾಕಚಕ್ಯತೆ ಇದೀಗ ತಿಮ್ಮಪ್ಪನ ಭಕ್ತರ ನೆರವಿಗೂ ಬರಲಿದೆ. ತಿರುಪತಿ ತಿಮ್ಮಪ್ಪನ ದೇವಾಲಯ ಇಡೀ ವಿಶ್ವದಲ್ಲೇ AI ಅಳವಡಿಸಿಕೊಳ್ಳುವ ಮೊಟ್ಟ ಮೊದಲ ದೇವಾಲಯ ಅನ್ನೋ ಖ್ಯಾತಿಗೆ ಪಾತ್ರವಾಗುತ್ತಿದೆ.
ಇದನ್ನೂ ಓದಿ: ಹೊರಗೆ ಸ್ಟಾರ್.. ಮನೆಯಲ್ಲಿ ಆಳು! – ಕರ್ಣ ಸೀರಿಯಲ್ ವಿಷ್ಣುವರ್ಧನ್ ಚಿತ್ರದ ಸ್ಟೋರಿನಾ?
ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಪ್ರತಿ ದಿನ ಲಕ್ಷ, ಲಕ್ಷ ಭಕ್ತರು ಭೇಟಿ ನೀಡುತ್ತಾರೆ. ಲಕ್ಷಾಂತರ ಭಕ್ತರ ಆಸೆ ಒಂದೇ ಆಗಿರುತ್ತೆ. ನಮಗೆ ಆದಷ್ಟು ಬೇಗ ತಿಮ್ಮಪ್ಪನ ದರ್ಶನ ಆಗಬೇಕು ಅನ್ನೋದು. ಗೋವಿಂದನ ಜಪದಲ್ಲಿ ಲಕ್ಷಾಂತರ ಭಕ್ತರು ಪ್ರತಿ ದಿನ ತಿರುಪತಿಗೆ ಭೇಟಿ ನೀಡುತ್ತಾರೆ.
ತಿರುಮಲಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಕಡಿಮೆ ಸಮಯದಲ್ಲಿ ದರ್ಶನ ಸಿಗಬೇಕು. ಇದಕ್ಕೆ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಸಾಕಷ್ಟು ವ್ಯವಸ್ಥೆಗಳನ್ನ ಮಾಡಿಕೊಂಡಿದೆ. ಆದರೆ ದಿನಕಳೆದಂತೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇರೋದು ದೊಡ್ಡ ಸವಾಲಿಗಿದೆ. ಈ ಹಿನ್ನೆಲೆ ಸವಾಲುಗಳ ಹಿನ್ನೆಲೆಯಲ್ಲಿ TTD ಇದೀಗ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ನ ಮೊರೆ ಹೋಗುತ್ತಿದೆ.
ಕಡಿಮೆ ಸಮಯದಲ್ಲಿ ಭಕ್ತರಿಗೆ ತಿಮ್ಮಪ್ಪನ ದರ್ಶನ ಆಗಬೇಕು ಎನ್ನುವ ಉದ್ದೇಶದಿಂದ ಎಐ ಆಧಾರಿತ ಸೌಲಭ್ಯ ತರಲು ದೇವಸ್ಥಾನದ ಆಡಳಿತ ಮಂಡಳಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ TTD ಗೂಗಲ್ ಇಂಕ್ ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಶೀಘ್ರವೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೂಲಕ ಭಕ್ತರ ಪ್ರವಾಸ ಹಾಗೂ ತಿಮ್ಮಪ್ಪನ ದರ್ಶನದ ವ್ಯವಸ್ಥೆಗೆ ಅತ್ಯಾಧುನಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ.
ತಿರುಮಲದಲ್ಲಿ ನಡೆದ ಟಿಟಿಡಿ ಟ್ರಸ್ಟ್ ಮಂಡಳಿಯ ಸಭೆಯ ನಂತರ ಟಿಟಿಡಿ ಅಧ್ಯಕ್ಷ ಬಿ.ಆರ್ ನಾಯ್ಡು ಅವರು ಈ ಬಗ್ಗೆ ಮಾತನಾಡಿದ್ದಾರೆ. ಈ ಒಪ್ಪಂದದ ಮೂಲಕ ಭಕ್ತರಿಗೆ ತೊಂದರೆಯಾಗದಂತೆ ಯಾತ್ರೆ ಕೈಗೊಳ್ಳಲು ತಿರುಮಲದಲ್ಲಿ ಎಐ ವ್ಯವಸ್ಥೆಗಳನ್ನ ಅಳವಡಿಸಿಕೊಳ್ಳಲಾಗುವುದು ಎಂದಿದ್ದಾರೆ. ಈ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ನದ್ದೇ (AI) ಅಳವಡಿಸಿಕೊಂಡ ವಿಶ್ವದ ಮೊದಲ ಹಿಂದೂ ದೇವಸ್ಥಾನವೆಂಬ ಖ್ಯಾತಿಗೆ ಟಿಟಿಡಿ ಪಾತ್ರವಾಗಲಿದೆ.