ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ವಿವಾದ – ರಮ್ಯ ವಿರುದ್ಧ ರಾಜೇಂದ್ರ ಸಿಂಗ್ ಬಾಬು ರಾಂಗ್

ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ವಿವಾದ – ರಮ್ಯ ವಿರುದ್ಧ ರಾಜೇಂದ್ರ ಸಿಂಗ್ ಬಾಬು ರಾಂಗ್

ಸ್ಯಾಂಡಲ್‌ವುಡ್‌ಗೆ ಟೈಟಲ್ ಕಿರಿಕ್ ಹೊಸತೇನಲ್ಲ. ಇದೀಗ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಸರದಿ. ಒಂದೇ ಶೀರ್ಷಿಕೆಯಲ್ಲಿ ಎರಡೆರಡು ಸಿನಿಮಾ ನಿರ್ಮಾಣವಾಗುತ್ತಿರುವ ಬಗ್ಗೆ ಈಗ ವಿವಾದ ಸೃಷ್ಟಿಯಾಗಿದೆ. ನಟಿ ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್ ಕೂಡಾ ಮುಗಿದಿದೆ. ಆದರೆ ಈಗ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿ :  ಸೂಪರ್ ಸ್ಟಾರ್ ರಜನಿಕಾಂತ್‌ಗೆ 72ನೇ ಹುಟ್ಟುಹಬ್ಬದ ಸಂಭ್ರಮ – ಬಾಬಾ ಸಿನಿಮಾ ರಿ ರಿಲೀಸ್ ಗಿಫ್ಟ್

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ಪತ್ರದಲ್ಲಿ ತಿಳಿಸಿದ್ದಾರೆ. 1990ರಲ್ಲಿ ಬಣ್ಣದ ಗೆಜ್ಜೆ ಚಿತ್ರ ಬಿಡುಗಡೆ ಆಗಿತ್ತು. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದರು. ‘ಬಣ್ಣದ ಗೆಜ್ಜೆ’ ಚಿತ್ರದ ‘ಸ್ವಾತಿ ಮುತ್ತಿನ ಮಳೆ ಹನಿಯೇ ಹಾಡು ಇಂದಿಗೂ ಜನಪ್ರಿಯವಾಗಿದೆ. ಇದೇ ಶೀರ್ಷಿಕೆಯನ್ನಿಟ್ಟುಕೊಂಡು ನಟಿ ರಮ್ಯಾ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ರಾಜೇಂದ್ರ ಸಿಂಗ್ ಬಾಬು ಅವರು ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ತಮ್ಮ ಪರ ವಕೀಲರ ಮೂಲಕ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದ ಹೊಸಚಿತ್ರದಲ್ಲಿ ರೆಬಲ್ ಸ್ಟಾರ್ ಅಂಬರೀಷ್ ಹಾಗೂ ಸುಹಾಸಿನಿ ಅವರು ನಟಿಸಿದ್ದರು.  ಶೇಕಡ 80ರಷ್ಟು ಶೂಟಿಂಗ್ ಕೂಡಾ ಮುಗಿದಿತ್ತು. ಆದರೆ ಅಂಬರೀಷ್ ನಿಧನರಾದ ಬಳಿಕ ಕೆಲವು ದೃಶ್ಯಗಳ ಚಿತ್ರೀಕರಣ ಹಾಗೆಯೇ ಬಾಕಿ ಉಳಿದುಕೊಂಡಿತು ಎಂದು ಪತ್ರದಲ್ಲಿ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ. ರಮ್ಯಾ ಅವರು ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ರಾಜ್ ಬಿ. ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ಆದರೆ ಈಗ ಸೃಷ್ಟಿಯಾಗಿರುವ ಶೀರ್ಷಿಕೆ ವಿವಾದ ಯಾವ ತಿರುವು ಪಡೆದುಕೊಳ್ಳೊತ್ತೋ ಕಾದುನೋಡಬೇಕಿದೆ.

suddiyaana