77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ – ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ

77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ – ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ

ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಹಾರೈಸಿದ್ದಾರೆ. ವಿಕಸಿತ ಭಾರತದ ಸಾಮೂಹಿಕ ನವೀಕೃತ ಶಕ್ತಿ ಮತ್ತು ಉತ್ಸಾಹವನ್ನು ತುಂಬುವಂತೆ ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಈ ಕುರಿತುಅವರು ತಮ್ಮ ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಯಶಗಳನ್ನು ಹಾರೈಸಿ, ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪಕ್ಕೆ ನಿಮ್ಮ ಶಕ್ತಿ ಮತ್ತು ಉತ್ಸಾಹವನ್ನು ಸೇರಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್!‌ – ನೀಲಿ, ಪಿಂಕ್‌, ಆರೆಂಜ್‌ ಲೈನ್‌ ಬಗ್ಗೆ ಬಿಗ್‌ ಅಪ್‌ಡೇಟ್!

ಗಣರಾಜ್ಯೋತ್ಸವದ ಅತಿಥಿಗಳಾದ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷೆ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಕರ್ತವ್ಯ ಪಥದಲ್ಲಿ ನಡೆಯಲಿರುವ ಭವ್ಯ ಆಚರಣೆಗೂ ಮೊದಲು ಭಾನುವಾರ ದೂರದರ್ಶನದ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.ವಿಕಸಿತ ಭಾರತ ನಿರ್ಮಾದಲ್ಲಿ ಮಹಿಳೆಯರ ಪಾತ್ರವನ್ನು ಶ್ಲಾಘಿಸಿದ ಮುರ್ಮು, ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ ವಿಶ್ವದಲ್ಲೇ ಭಾರತದ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ದೇಶದ ಆರ್ಥಿಕ ಭವಿಷ್ಯವು ಸ್ವಾವಲಂಬನೆಯಿಂದ ರೂಪುಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿಯತ್ತ ದೇಶ ಸಾಗುತ್ತಿದೆ ಎಂದು ಅವರು ತಿಳಿಸಿದರು.

ಮಹಿಳಾ ಕ್ರಿಕೆಟ್ ತಂಡ, ಸ್ವಸಹಾಯ ಗುಂಪುಗಳು, ಕೃಷಿ, ಬಾಹ್ಯಾಕಾಶ, ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಾಧನೆಗಳ ಬಗ್ಗೆ ಉಲ್ಲೇಖಿಸಿದ ಅವರು, ದೇಶದ ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತಿದ್ದಾರೆ ಎಂದರು.ಸಾಂಪ್ರದಾಯಿಕ ಕಟ್ಟುಪಾಡುಗಳನ್ನು ಮುರಿದು ಮಹಿಳೆಯರು ಮುನ್ನಡೆ ಸಾಧಿಸುತ್ತಿದ್ದಾರೆ. ದೇಶದ ಒಟ್ಟಾರೆ ಅಭಿವೃದ್ಧಿಗೆ ತಮ್ಮ ಸಕ್ರಿಯ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು, ಪಂಚಾಯತ್ ರಾಜ್ ಗಳಲ್ಲೂ ಮಹಿಳಾ ಪ್ರಾತಿನಿಧ್ಯವು ಹೆಚ್ಚಾಗಿರುವುದನ್ನು ಉಲ್ಲೇಖಿಸಿದರು.

Kishor KV