ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಉಡುಪಿ ನ್ಯಾಯಾಲಯ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಬೆತ್ತಲೆ ಮೆರವಣಿಗೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿದ ಕೇಂದ್ರ

ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ತನಿಖಾಧಿಕಾರಿಗಳ ತನಿಖೆಗೆ ಸಹಕರಿಸಬೇಕು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಸಾಕ್ಷಿ ಗಳಿಗೆ ಯಾವುದೇ ಬೆದರಿಕೆ ಹಾಕಬಾರದು ಎಂಬ ಷರತ್ತುಗಳೊಂದಿಗೆ ತಲಾ 20,000 ರೂ. ಬಾಂಡ್ ಮೇಲೆ ಕೋರ್ಟ್ ಜಾಮೀನು ನೀಡಿದೆ.

suddiyaana