ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್! – ಒಂದೇ ಕುಟುಂಬದ 7 ಮಂದಿ ಸಾವು.. 10ಕ್ಕೂ ಹೆಚ್ಚು ಜನರಿಗೆ ಗಾಯ!

ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್! – ಒಂದೇ ಕುಟುಂಬದ 7 ಮಂದಿ ಸಾವು.. 10ಕ್ಕೂ ಹೆಚ್ಚು ಜನರಿಗೆ ಗಾಯ!

ಕೊಪ್ಪಳದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸೇತುವೆ ಮೇಲಿನಿಂದ ಟ್ರ್ಯಾಕ್ಟರ್‌ ಕೆಳಗೆ ಬಿದ್ದಿದ್ದು, ಪರಿಣಾಮ ಒಂದೇ ಕುಟುಂಬದ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕೇದಾರನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಲಕ್ಷ ಲಕ್ಷ ಭಕ್ತರು – ಆರಂಭದಲ್ಲೇ ಭಕ್ತರ ಸಂಖ್ಯೆ ಹೆಚ್ಚಾಗಿದ್ದಕ್ಕೆ ಆರೋಗ್ಯ ಇಲಾಖೆ ಅಲರ್ಟ್

ಈ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಟ್ಯಾಂಕರ್​ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ನಡೆದಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಹೊಸಪೇಟೆ ಮತ್ತು ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Shwetha M

Leave a Reply

Your email address will not be published. Required fields are marked *