ಬೆಂಗಳೂರಿನಲ್ಲಿ RCB vs LSG ಹೈವೋಲ್ಟೇಜ್‌ ಮ್ಯಾಚ್‌ – ಈ ಸ್ಥಳಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ

ಬೆಂಗಳೂರಿನಲ್ಲಿ RCB vs LSG ಹೈವೋಲ್ಟೇಜ್‌ ಮ್ಯಾಚ್‌ – ಈ ಸ್ಥಳಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ

IPL 2024 ರ 15ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್‌ ಮ್ಯಾಚ್‌ ನಡೆಯಲಿದೆ. ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಮಂಗಳವಾರ ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ  ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ತವರು ಜಿಲ್ಲೆ ಬಿಟ್ಟು ಬೇರೆ ಕ್ಷೇತ್ರಗಳಿಗೆ ಜಂಪ್ ಆದವರೆಷ್ಟು? – ಬದಲಾಗುತ್ತಾ ಲೆಕ್ಕಾಚಾರ?

ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಆದರೆ ಕ್ರಿಕೆಟ್​ ಪ್ರೇಮಿಗಳ ಅನುಕೂಲಕ್ಕಾಗಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ.

ರಾತ್ರಿ 7:30ಕ್ಕೆ RCB vs LSG ಪಂದ್ಯ ಆರಂಭವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಧ್ಯಾಹ್ನ 3 ಗಂಟೆಯಿಂದಲೆ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಕ್ವೀನ್ಸ್​ ರಸ್ತೆ, ಎಂಜಿ ರಸ್ತೆ, ಕಬ್ಬನ್​ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್​ ಸ್ಟ್ರೀಟ್​ ರಸ್ತೆ, ಸೆಂಟ್​ ಮಾರ್ಕ್ಸ್​ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್​ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್​​ ಮಲ್ಯ ರಸ್ತೆ, ಕಿಂಗ್ಸ್​ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇನ್ನು ಕ್ರಿಕೇಟ್​ ಪ್ರೇಮಿಗಳ ವಾಹನ ನಿಲುಗಡೆಗಾಗಿ ಬೆಂಗಳೂರು ಸಂಚಾರ ಪೊಲೀಸ್​ ಅಧಿಕಾರಿಗಳು ಕೆಲವು ಸ್ಥಳಗಳನ್ನು ಗುರುತಿಸಿದ್ದಾರೆ. ಸೆಂಟ್​ ಜೋಸೆಫ್​​ ಇಂಡಿಯನ್ ಸ್ಕೂಲ್​ ನೈದಾನ, ಯು.ಬಿ ಸಿಟಿ ಪಾರ್ಕಿಂಗ್​ ಸ್ಥಳ, ಬಿಎಂಟಿಸಿ ಬಸ್​ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್​ ಕೆಜಿಐಡಿ ಬಿಲ್ಡಿಂಗ್​, ಕಿಂಗ್ಸ್​ ರಸ್ತೆ (ಕಬ್ಬನ್​ಪಾರ್ಕ್​ ಒಳಭಾಗ) ದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

ಇಂದಿನ ಪಂದ್ಯದ ಬಗ್ಗೆ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ 2024 ರಲ್ಲಿ ಇದು ಆರ್‌ಸಿಬಿಯ ನಾಲ್ಕನೇ ಪಂದ್ಯವಾಗಿದ್ದು, ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

ಆಡಿರುವ ಮೂರು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಎರಡು ಪಂದ್ಯದಿಂದ 2 ಅಂಕಗಳನ್ನು ಹೊಂದಿ ಆರನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

Shwetha M