ಸಿಲಿಕಾನ್ ಸಿಟಿ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ! – ಪರ್ಯಾಯ ಮಾರ್ಗ ಯಾವುದು?

ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಮಹತ್ವದ ಸುದ್ದಿಯೊಂದಿದೆ. ಬೆಂಗಳೂರಿನ ಈ ಮಾರ್ಗದಲ್ಲಿ ಬರೋಬ್ಬರಿ 21 ದಿನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ನಾಯಕನಾಗಿ ಮೊದಲ ಟಾಸ್ ಗೆದ್ದ ಗಿಲ್ – WI ವಿರುದ್ಧ ಬ್ಯಾಟಿಂಗ್ ಆಯ್ದಕೊಂಡ IND
ಪಣತ್ತೂರು ಮುಖ್ಯ ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪಣತ್ತೂರು ಮುಖ್ಯ ರಸ್ತೆಯಲ್ಲಿ ಅಕ್ಟೋಬರ್ 10 ರಿಂದ 21 ದಿನಗಳ ಕಾಲ ಸಂಚಾರ ನಿರ್ಬಂಧಿಸಲಾಗಿದೆ. ಪಣತ್ತೂರು ಮುಖ್ಯ ರಸ್ತೆಯ ಪಣತ್ತೂರು ರೈಲ್ವೇ ಬ್ರಿಡ್ಜ್ನಿಂದ ಬೋಗನಹಳ್ಳಿ ಜಂಕ್ಷನ್ ವರೆಗೆ ಎರಡು ಬದಿಯ ಸಂಚಾರ ನಿರ್ಬಂಧಿಸಲಾಗಿದೆ.
ಇನ್ನು ಟ್ರಾಫಿಕ್ ಪೊಲೀಸರು ಬದಲಿ ಮಾರ್ಗವನ್ನ ಮಾಡಿದ್ದು, ಈ ಬಗ್ಗೆ ವಾಹನ ಸವಾರರಿಗೆ ಮಾಹಿತಿ ನೀಡಿದ್ದಾರೆ. ವೈಟ್ಫೀಲ್ಡ್ ಮತ್ತು ವರ್ತೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಚಲಿಸುವ ವಾಹನಗಳು ಬಳಗೆರೆ ಟಿ ಜಂಕ್ಷನ್ ಹತ್ತಿರ ಬಲತಿರುವು ಪಡೆದು, ವಿಬ್ ಗಯಾರ್ ರಸ್ತೆಯ ಮುಖಾಂತರ ವರ್ತೂರು ಮುಖ್ಯ ರಸ್ತೆ ಕಡೆಗೆ ಸಂಚರಿಸಿ ಮಾರತ್ತಹಳ್ಳಿ ಬ್ರಿಡ್ಜ್ ಹತ್ತಿರ ಎಡ ತಿರುವು ಪಡೆದು ಹೊರ ವರ್ತುಲ ರಸ್ತೆ ತಲುಪಿ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಹೋಗಬಹುದಾಗಿದೆ.
ಇನ್ನು ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ವರ್ತೂರು ಮತ್ತು ವೈಟ್ಫೀಲ್ಡ್ ಕಡೆಗೆ ಸಂಚರಿಸುವ ವಾಹನಗಳು ಹೊರ ವರ್ತುಲ ರಸ್ತೆಯ ಮುಖಾಂತರ ಮಾರತ್ತಹಳ್ಳಿ ಬ್ರಿಡ್ಜ್ ಕಡೆಗೆ ಸಂಚರಿಸಿ ವರ್ತೂರು ಮುಖ್ಯರಸ್ತೆ ತಲುಪಿ ವರ್ತೂರು ಮತ್ತು ವೈಟ್ಫೀಲ್ಡ್ ಕಡೆಗೆ ಸಂಚರಿಸಬಹುದಾಗಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಮಾರ್ಪಾಡು ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಟ್ರಾಫಿಕ್ ಪೊಲೀಸರು ಹೇಳಿದ್ದಾರೆ.

ನೋಡಿರಿ

