ವರುಣಾರ್ಭಟಕ್ಕೆ ಭೀಕರ ದುರಂತ! – ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ

ದೇಶದಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಜನರು ತತ್ತಿಸಿದ್ದಾರೆ. ಕರ್ನಾಟಕದ ಹಲವು ಭಾಗಗಳಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು, ವಿಜಯಪುರದಲ್ಲಿ ದೊಡ್ಡ ದುರಂತ ಸಂಭವಿಸಿದೆ. ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ದರ್ಶನ್‌ಗೆ ಒಂದು ವರ್ಷ ಬೇಲ್ ಇಲ್ಲ – ಒಂದು ವರ್ಷದೊಳಗೆ ವಿಚಾರಣೆ ಮುಗಿಸಲು ಕೆಳ ನ್ಯಾಯಾಲಯಕ್ಕೆ ಸೂಚನೆ
ಈ ಘಟನೆ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ.
ತಮ್ಮ ಮನೆಯ ದುರಸ್ಥಿ ಮಾಡಿಸುತ್ತಿದ್ದ ಗುರುನಾಥ ಬಡಿಗೇರ, ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಗುರುವಾರ ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ವರ ಶವ ಹೊರ ತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಾಲ್ವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನೋಡಿರಿ

