ಕೇರಳದಲ್ಲಿ ಬೋಟ್ ಮುಳುಗಿ ಮೃತಪಟ್ಟವರ ಸಂಖ್ಯೆ 22ಕ್ಕೇರಿಕೆ – ರಾಷ್ಟ್ರಪತಿ, ಪ್ರಧಾನಮಂತ್ರಿಗಳಿಂದ ಸಂತಾಪ ಸೂಚನೆ

ಕೇರಳದಲ್ಲಿ ಬೋಟ್ ಮುಳುಗಿ ಮೃತಪಟ್ಟವರ ಸಂಖ್ಯೆ 22ಕ್ಕೇರಿಕೆ – ರಾಷ್ಟ್ರಪತಿ, ಪ್ರಧಾನಮಂತ್ರಿಗಳಿಂದ ಸಂತಾಪ ಸೂಚನೆ

ಕೇರಳದ ಮಲಪ್ಪುರಂನಲ್ಲಿ ಬೋಟ್  ಮುಳುಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಭಾನುವಾರ ಸಂಜೆ 40ಕ್ಕೂ ಹೆಚ್ಚು ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿತ್ತು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಶೋಧಕಾರ್ಯಾಚರಣೆ ನಡೆಸುತ್ತಿದ್ದಾರೆ ಇಲ್ಲಿಯವರೆಗೆ 22 ಮಂದಿ ಶವ ಪತ್ತೆಯಾಗಿದೆ.

ಇದನ್ನೂ ಓದಿ: 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ ಬಲರಾಮ ಇನ್ನಿಲ್ಲ – ಅಚ್ಚು ಮೆಚ್ಚಿನ ಗಜರಾಜನಿಗೆ ಅಂತಿಮ ವಿದಾಯ

ತೂವಲ್ ತೀರ್ಥಂ ಪ್ರವಾಸಿ ತಾಣದ ಪುರಪುಜಾ ನದಿಯಲ್ಲಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದೋಣಿಯಲ್ಲಿದ್ದ ಪ್ರಯಾಣಿಕರು ಮಲಪ್ಪುರಂ ಜಿಲ್ಲೆಯ ಪರಪ್ಪನಂಗಡಿ ಮತ್ತು ತನೂರ್ ಪ್ರದೇಶಗಳಿಗೆ ಸೇರಿದವರು ಎಂದು ಗುರತಿಸಲಾಗಿದೆ. ಭಾನುವಾರ ರಜಾದಿನವಾಗಿದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೋಟಿನಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಂತಾಪ ಸೂಚಿಸಿದ್ದಾರೆ, ಕೇರಳದಲ್ಲಿ ಇಂದು ಅಧಿಕೃತ ಶೋಕಾಚರಣೆಯನ್ನು ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇಲ್ಲಿನ ಮನರಂಜನಾ ದೋಣಿ ಸೇವೆಗಳಿಗೆ ಸಂಜೆ 5 ರವರೆಗೆ ಮಾತ್ರ ಕಾರ್ಯನಿರ್ವಹಿಸಲು ವರದಿಗಳ ಪ್ರಕಾರ, ಪೊಲೀಸ್ ತಂಡಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಅಗ್ನಿಶಾಮಕ ಮತ್ತು ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

suddiyaana