ಊಟ ಮಾಡುವಾಗ ಗಂಟಲಲ್ಲಿ ಸಿಲುಕಿದ ಅನ್ನದ ಅಗುಳು! – ದುರಂತ ಅಂತ್ಯ ಕಂಡ ಯುವಕ!

ಊಟ ಮಾಡುವಾಗ ಗಂಟಲಲ್ಲಿ ಸಿಲುಕಿದ ಅನ್ನದ ಅಗುಳು! – ದುರಂತ ಅಂತ್ಯ ಕಂಡ ಯುವಕ!

ಬದುಕು ಎಂದರೆ ಹೀಗೆ ಅಲ್ಲವೇ..  ಯಾರ ಬದುಕಿನಲ್ಲಿ ಯಾವಾಗ, ಏನು ನಡೆಯುತ್ತದೆ ಎಂದು ಹೇಳಲು ಅಸಾಧ್ಯ. ಇವತ್ತು ಇದ್ದವರು ನಾಳೆ ಇರ್ತಾರೆ ಅನ್ನೋ ಗ್ಯಾರೆಂಟಿ ಇಲ್ಲ.. ತಿನ್ನೋ ಅನ್ನ ಕೂಡ ಕೆಲವೊಂದು ಬಾರಿ ಜೀವಕ್ಕೆ ಕಂಟಕವಾಗ್ಬೋದು. ಇದೀಗ ಉತ್ತರಕನ್ನಡ ಜಿಲ್ಲೆಯಲ್ಲೂ ಇಂತಹದ್ದೇ ಘಟನೆ ನಡೆದಿದೆ. ಊಟ ಮಾಡುತ್ತಿದ್ದ ವೇಳೆ, ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ:ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್‌ – ನಟಿ ರಾಧಿಕಾ ಕುಮಾರಸ್ವಾಮಿ ಕೋಟಿ ಕೋಟಿ ಹಣಕಾಸು ವ್ಯವಹಾರ ರಿವೀಲ್!

ಈ ಆಘಾತಕಾರಿ ಘಟನೆ, ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ.

ಅಮಿತ್ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮಿತ್, ಚಿಕಿತ್ಸೆಯನ್ನು ಸಹ ಪಡೆಯುತ್ತಿದ್ದರು. ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಅಮಿತ್‌ ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್‌ಗೆ ನೀರು ಕುಡಿಸಿದ್ದಾರೆ. ಆದ್ರೆ ಅದು ಪ್ರಯೋಜನವಾಗಲಿಲ್ಲ. ಆತ ಅಲ್ಲೇ ಕುಸಿದು ಬಿದಿದ್ದ. ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆಂದು ದೃಢಪಡಿಸಿದ್ದಾರೆ.

ಅಮಿತ್ ಮಾಳಸೇರ್‌ನ ಅಕಾಲಿಕ ಸಾವು ಕುಟುಂಬದ ಮೇಲೆ ಭಾರೀ ಆಘಾತವನ್ನು ಉಂಟುಮಾಡಿದೆ. ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಮಿತ್, ಕುಟುಂಬದ ಆರ್ಥಿಕ ಜವಾಬ್ದಾರಿಯನ್ನು ಹೊತ್ತಿದ್ದ. ಆತನ ಅನಾರೋಗ್ಯದಿಂದಾಗಿ ಕುಟುಂಬ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯರು ಮತ್ತು ಸಂಬಂಧಿಕರು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Shwetha M