ಶಾಸಕರಿಗೆ ತರಬೇತಿ ಶಿಬಿರ – ಉಪನ್ಯಾಸಕ್ಕೆ ವಿವಾದಿತ ವ್ಯಕ್ತಿಗಳ ಹೆಸರುಗಳನ್ನು ಕೈ ಬಿಟ್ಟ ಯು.ಟಿ ಖಾದರ್‌

ಶಾಸಕರಿಗೆ ತರಬೇತಿ ಶಿಬಿರ – ಉಪನ್ಯಾಸಕ್ಕೆ ವಿವಾದಿತ ವ್ಯಕ್ತಿಗಳ ಹೆಸರುಗಳನ್ನು ಕೈ ಬಿಟ್ಟ ಯು.ಟಿ ಖಾದರ್‌

ಬೆಂಗಳೂರು: ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ಏರ್ಪಸಿರುವ ಮೂರು ದಿನಗಳ ತರಬೇತಿ ಶಿಬಿರವನ್ನು ಸೋಮವಾರ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ತೀವ್ರ ವಿರೋಧದ ಬೆನ್ನಲ್ಲೇ ಶಿಬಿರದ ಆಮಂತ್ರಣ ಪತ್ರದಿಂದ ವಿವಾದಿತ ವ್ಯಕ್ತಿಗಳ ಹೆಸರುಗಳನ್ನು ಕೈಬಿಡಲಾಗಿದೆ.

ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಹೆಚ್ಚಾದ ಮಹಿಳಾ ಭಕ್ತರು – ರಾಜ್ಯದ ದೇಗುಲಗಳಲ್ಲಿ ಹೆಚ್ಚಾದ ಹುಂಡಿ ಸಂಗ್ರಹ

ನೆಲಮಂಗಲ ಬಳಿಯಿರುವ ಧರ್ಮಸ್ಥಳದ ನ್ಯಾಚುರೋಪತಿ ಕೇಂದ್ರದಲ್ಲಿ ಜೂನ್ 26 ರಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಇದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ರಾಜಯೋಗಿನಿ ಬ್ರಹ್ಮಕುಮಾರಿ ಆಶಾ ದೀದಿ, ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ ಗುರೂಜಿ ಅವರನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಹ್ವಾನಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದರು. ಇದರ ಬೆನ್ನಲ್ಲೇ, ಧಾರ್ಮಿಕ ಪ್ರತಿನಿಧಿಗಳ, ವಿವಾದಾಸ್ಪದ ವ್ಯಕ್ತಿಗಳ ಪ್ರವಚನವನ್ನು ಕೈ ಬಿಡಬೇಕು ಎಂದು ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ವಲಯ ಒಕ್ಕೊರಲಿನಿಂದ ಆಗ್ರಹಿಸಿದ್ದವು. ಜತೆಗೆ ಈ ವಿವಾದ ದಿನೇ ದಿನೇ ಹೆಚ್ಚಾದ ಕಾರಣ ಇದೀಗ ಅಧಿಕೃತವಾಗಿ ಗುರುರಾಜ ಕರ್ಜಗಿ, ಶ್ರೀ ಶ್ರೀ ರವಿಶಂಕರ ಗುರೂಜಿ ಹೆಸರುಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಶಿಬಿರದ ಆಹ್ವಾನ ಪತ್ರಿಕೆ ಹೊರಬಿದ್ದಿದೆ. ಗುರುರಾಜ ಕರ್ಜಗಿ ಬದಲಾಗಿ ಮುಖ್ಯಮಂತ್ರಿ ಚಂದ್ರು ಅವರು ಶಾಸನ ಸಭೆಯಲ್ಲಿ ಕರ್ತವ್ಯದ ಹಾಸ್ಯಭರಿತ ನಿರ್ವಹಣೆ ಕುರಿತು ಮಾತನಾಡಲಿದ್ದಾರೆ. ಅಂತೆಯೇ ರವಿಶಂಕರ ಗುರೂಜಿ ಬದಲಾಗಿ ಬ್ರಹ್ಮ ಕುಮಾರಿಸ್ ಸಂಸ್ಥೆಯ ಬಿ.ಕೆ.ವೀಣಾ, ಬಿ.ಕೆ.ಭುವನೇಶ್ವರಿ ಸಂವಾದ ನಡೆಸಿಕೊಡಲಿದ್ದಾರೆ.

suddiyaana