ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಕೇಸ್‌ ವರ್ಗಾವಣೆ –  ಹೈಕೋರ್ಟ್ ಆದೇಶ ಪ್ರತಿ ಪರಿಶೀಲಿಸಿ ತನಿಖೆ!

ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಕೇಸ್‌ ವರ್ಗಾವಣೆ –  ಹೈಕೋರ್ಟ್ ಆದೇಶ ಪ್ರತಿ ಪರಿಶೀಲಿಸಿ ತನಿಖೆ!

ಬೆಂಗಳೂರು: ಸ್ಯಾಂಡಲ್‌ ವುಡ್‌ ನಟ ಉಪೇಂದ್ರ ಅವರು ಸೋಶಿಯಲ್‌ ಮೀಡಿಯಾದಲ್ಲಿ ಜಾತಿ ನಿಂದನೆ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಶಿಯಲ್‌ ಮೀಡಿಯಾದಲ್ಲಿ ಜಾತಿ ನಿಂದನೆ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೀಗ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳು ವರ್ಗಾವಣೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ ಪ್ರಕರಣ- ದೂರು ಕೊಟ್ಟ ಅಧಿಕಾರಿಗೇ ಪೊಲೀಸರಿಂದ ನೋಟಿಸ್‌!

ಪ್ರಜಾಕೀಯ 6 ವರ್ಷ ಪೂರೈಸಿದ ಸಂದರ್ಭದಲ್ಲಿ ನಟ ಉಪೇಂದ್ರ ಫೇಸ್ಬುಕ್ ಲೈವ್‌ ಬಂದು ಮಾತನಾಡಿದ್ದರು. ಈ ವೇಳೆ “ಊರು ಎಂದ ಮೇಲೆ ಹೊಲಗೇರಿ ಇರುತ್ತೆ” ಎನ್ನುವ ಗಾದೆ ಮಾತನ್ನು ಹೇಳಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಉಪೇಂದ್ರ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಭಾರೀ ಆಕ್ರೋಶ ವ್ಯಕ್ತವಾಯಿತು. ಕೂಡಲೇ ಉಪೇಂದ್ರ ವಿಡಿಯೋ ಡಿಲೀಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದ್ದರು. ಆದರೂ ಆಕ್ರೋಶ ಕಮ್ಮಿ ಆಗಿರಲಿಲ್ಲ. ಬೆಂಗಳೂರು, ರಾಮನಗರದಲ್ಲಿ ಉಪೇಂದ್ರ ಪ್ರತಿಕೃತಿ ದಹಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಉಪೇಂದ್ರ ಆಕ್ಷೇಪಾರ್ಹ ಪದ ಬಳಕೆಯನ್ನು ಖಂಡಿಸಿ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿತ್ತು.

ಉಪೇಂದ್ರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಉಪ್ಪಿ ಹೈಕೋರ್ಟ್ ಮೆಟ್ಟಿಲೇರಿದ್ದರು.  ಉಪೇಂದ್ರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಎಫ್‌ಐಆರ್‌ಗೆ ಮಧ್ಯಂತರ ತಡೆಕೋರಿ ಆದೇಶ ನೀಡಿತ್ತು. ಇದೀಗ ನಟ ಉಪೇಂದ್ರ ವಿರುದ್ಧ ದಾಖಲಾಗಿರೋ ಕೇಸುಗಳ ವರ್ಗಾವಣೆಯಾಗುವ ಸಾಧ್ಯತೆ ಇದೆ. ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿರೋ ಕೇಸ್ ಅನ್ನು ಚೆನ್ನಮ್ಮನಕೆರೆ ಠಾಣೆಗೆ ವರ್ಗಾವಣೆ ಮಾಡಲು ಆಲೋಚಿಸಲಾಗಿದೆ.

ಮೊದಲು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಹಲಸೂರು ಗೇಟ್ ಠಾಣೆ ಎಫ್ ಐಆರ್ ಕೂಡ ಅಲ್ಲಿಗೆ ವರ್ಗಾವಣೆ ಮಾಡಲು ನಿರ್ಧಾರ ಮಾಡಲಾಗಿದೆ. ಚೆನ್ನಮ್ಮನಕೆರೆ ಠಾಣೆಯ ಕೇಸ್ ಬಗ್ಗೆ ವಿ.ವಿ.ಪುರಂ ಎಸಿಪಿ ನಾಗರಾಜ್  ತನಿಖೆ ನಡೆಸಲಿದ್ದಾರೆ. ಹೈಕೋರ್ಟ್‌ ಆದೇಶ ಪ್ರತಿ ಪರಿಶೀಲಿಸಿ ಉಪೇಂದ್ರ ವಿರುದ್ಧ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಸಿದ್ದಾರೆ.

suddiyaana