ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ – ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ – ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದಾಗಿ ಖಾಸರಿ ಸಾರಿಗೆ ಸಂಸ್ಥೆಗಳಿಗೆ ಹೊಡೆತ ಬಿದ್ದಿದೆ. ಹೀಗಾಗಿ ಈ ಯೋಜನೆಯನ್ನು ವಿಸ್ತರಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ಕೊಟ್ಟಿದ್ದವು. ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬೇಡಿಕೆಗಳನ್ನು ಈಡೇರಿಸವುದಾಗಿ ಭರವಸೆ ನೀಡಿದ ಹಿನ್ನೆಲೆ ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರವನ್ನು ಹಿಂಪಡೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್‌ ಶರ್ಮಾ, ಖಾಸಗಿ ಸಾರಿಗೆ ಸಂಸ್ಥೆಗಳ ಬೇಡಿಕೆಯನ್ನು ಈಡೇರಿಸುವುದಾಗಿ ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ. ಹಾಗಾಗಿ ಬಂದ್​ ಹಿಂಪಡೆಯುತ್ತಿದ್ದೇವೆ. ಟ್ಯಾಕ್ಸ್​ ಕಡಿಮೆ ಬಗ್ಗೆಯೂ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ನಾಡಿದ್ದು ಮತ್ತೆ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಖಾಸಗಿ ಸಂಸ್ಥೆಗಳ ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಖಾಸಗಿ ಸಾರಿಗೆ ಸಂಘಟನೆಗಳು ಕರೆ ಕೊಟ್ಟ ಬೆಂಗಳೂರು ಬಂದ್ ಹಿನ್ನಲೆಯಲ್ಲಿ ಫ್ರೀಡಂ ಪಾರ್ಕ್ ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆಗಮಿಸಿ ಮನವಿ ಸ್ವೀಕಾರ ಮಾಡಿದ್ದಾರೆ. ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, 36 ಸಂಘಟನೆಗಳು ಇಂದು ಪ್ರತಿಭಟನೆಯಲ್ಲಿದ್ದು, ನನ್ನನ್ನೂ 37ನೇ ಸಂಘಟನೆಗಳು ಎಂದು ಸೇರಿಸಿಕೊಳ್ಳಿ, ನಾನೂ ನಿಮ್ಮ ಪರವಾಗಿ ಇದ್ದೇನೆ, ನಿಮ್ಮ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಒಕ್ಕೂಟ ಬೇಡಿಕೆ ಈಡೇರಿಸಲು 5,500 ಕೋಟಿ ರೂ. ಸರ್ಕಾರಕ್ಕೆ ಬೇಕಾಗುತ್ತದೆ. ಇದನ್ನು ಮಾಡೋಕೆ ಸಾಧ್ಯಾನಾ? ಖಾಸಗಿ ಸಾರಿಗೆಯವರ ಬೇಡಿಕೆಗಳಲ್ಲಿ 2 ಸಮಸ್ಯೆಗಳು ಮಾತ್ರ ನಮಗೆ ಸೇರಿದ್ದು, ಉಳಿದ ಸಮಸ್ಯೆಗಳು 4-5 ವರ್ಷಗಳಿಂದ ಇದೆ. ಬಿಜೆಪಿ ರಾಜಕೀಯಕ್ಕಾಗಿ ಮುಷ್ಕರಕ್ಕೆ ಬೆಂಬಲ ಕೊಟ್ಟಿದೆ. ಬಿಜೆಪಿಯವರ ಸರ್ಕಾರ ಇದ್ದಾಗ ಯಾಕೆ ಸಮಸ್ಯೆ ಪರಿಹಾರ ಮಾಡಲಿಲ್ಲ? ಸರ್ಕಾರ ಪ್ರಾಕ್ಟಿಕಲ್ ಆಗಿ ಇರೋ ಸಮಸ್ಯೆಗೆ ಪರಿಹಾರ ಕೊಡುತ್ತದೆ. ಸಿಎಂ ಜೊತೆ ಮಾತನಾಡಿ ಪರಿಹಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

suddiyaana