ತವರಿನಲ್ಲೇ ಮಣ್ಣು ಮುಕ್ಕಿದ ಪಾಕಿಸ್ತಾನ – ತ್ರಿಕೋನ ಸರಣಿಯಲ್ಲಿ ಹೀನಾಯ ಸೋಲು

ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಗೆ ಉಳಿದಿರೋದು ಇನ್ನು ನಾಲ್ಕೇ ದಿನ. ಆದ್ರೆ ಐಸಿಸಿ ಟೂರ್ನಿಯ ಹೊಸ್ತಿಲಲ್ಲೇ ಪಾಕಿಸ್ತಾನ ಪ್ಲೇಯರ್ಸ್ ತವರಿನಲ್ಲೇ ಮುಖಭಂಗ ಅನುಭವಿಸಿದ್ದಾರೆ. ಕರಾಚಿಯ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಹೀನಾಯ ಸೋಲು ಕಂಡಿದೆ. ಪಾಕಿಸ್ತಾನ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಕಿವೀಸ್ ಪಡೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಮೂಲಕ ಸೋಲಿನೊಂದಿಗೆ ಪಾಕ್ ಪಡೆ ಚಾಂಪಿಯನ್ಸ್ ಟ್ರೋಫಿಗೆ ಕಾಲಿಡ್ತಿದೆ.
ಇದನ್ನೂ ಓದಿ : WPL ನಲ್ಲಿ RCB ಹಾವಳಿ – ಇತಿಹಾಸ ನಿರ್ಮಿಸಿದ ಬೆಂಗಳೂರು ಹುಡುಗಿಯರು
ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ತ್ರಿಕೋನ ಸರಣಿ ನಡೆಯಿತು. ಇದೊಂಥರಾ ವಾರ್ಮ್ ಅಪ್ ಮ್ಯಾಚ್ ಎಂದೇ ಬಿಂಬಿತವಾಗಿತ್ತು. ಆದ್ರೆ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಸೋತು ಸುಣ್ಣವಾಗಿದೆ. ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಡಿಸೈಡ್ ಮಾಡಿದರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 49.3 ಓವರ್‌ಗಳಲ್ಲಿ 242 ರನ್‌ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನ ನೀಡಿದ್ದ ಗುರಿಯನ್ನು 45.5 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ ಬೆನ್ನಟ್ಟಿದ ನ್ಯೂಜಿಲೆಂಡ್ 28 ಎಸೆತಗಳು ಮತ್ತು 5 ವಿಕೆಟ್‌ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿದಿದೆ. ಇನ್ನೊಂದು ಇಂಟ್ರೆಸ್ಟಿಂಗ್ ವಿಚಾರ ಅಂದ್ರೆ ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳೇ ಮುಖಾಮುಖಿಯಾಗಲಿದೆ. ಇದೀಗ ಪ್ರಮುಖ ಟೂರ್ನಿಗೂ ಮುನ್ನ ಪಾಕ್ ತಂಡವನ್ನು ಬಗ್ಗು ಬಡಿಯುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ. ಇನ್ನು ಪಾಕಿಸ್ತಾನದ ಸೋಲಿಗೆ ತಂಡದ ಆಟಗಾರರೇ ಕಾರಣ ಅಂತಾ ಮಾಜಿ ಕ್ರಿಕೆಟಿಗರು ಗರಂ ಆಗಿದ್ದಾರೆ. ಟಾಸ್ ಗೆದ್ದರೂ ಕೂಡ ಮೊದಲು ಯಾಕೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ್ರು. ಇಲ್ಲಿನ ಪಿಚ್ ಬಗ್ಗೆ ಗೊತ್ತಿದ್ದೂ ಇಂಥಾ ನಿರ್ಧಾರ ತಗೊಳ್ತಾರಾ ಎಂದು ಕ್ಯಾಪ್ಟನ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಮತ್ತೊಂದೆಡೆ ಹಾಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನಾ ನಡೆದ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡಿದೆ. 2-0 ಅಂತರದಲ್ಲಿ ಸರಣಿಯಲ್ಲಿ ವೈಟ್ ವಾಶ್ ಮುಖಭಂಗ ಅನುಭವಿಸಿದೆ. ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಭಾರೀ ಅಂತರದ ಹೀನಾಯ ಸೋಲು ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 281 ರನ್ ಗಳಿಸಿತ್ತು. ಸವಾಲಿನ ಮೊತ್ತ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 107 ರನ್ ಗಳಿಸಿ ಆಲೌಟ್ ಆಗುವ ಮೂಲಕ ಹೀನಾಯ ಸೋಲು ಕಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಮಿಂಚಿದ ಶ್ರೀಲಂಕಾ ತಂಡ ಬರೋಬ್ಬರ 174 ರನ್‌ಗಳ ಅಂತರದ ಗೆಲುವು ಸಾಧಿಸಿತು. ಆ ಮೂಲಕ ಅಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡ ಅತೀ ದೊಡ್ಡ ಅಂತರದ ಗೆಲುವು ಇದಾಗಿದೆ.