ತ್ರಿಪುರಾ ವಿಧಾನಸಭಾ ಚುನಾವಣೆಗೆ 81.10% ವೋಟಿಂಗ್ – 60 ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು..!?

ತ್ರಿಪುರಾ ವಿಧಾನಸಭಾ ಚುನಾವಣೆಗೆ 81.10% ವೋಟಿಂಗ್ – 60 ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು..!?

ತ್ರಿಪುರಾ ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಾವು ರಂಗೇರಿದೆ. ಗುರುವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆದಿದೆ. ಚುನಾವಣಾ ಭದ್ರತೆಗಾಗಿ 11 ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ 400 ಸಿಆರ್‌ಪಿಎಫ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು. 60 ವಿಧಾನಸಭಾ ಕ್ಷೇತ್ರವಿರುವ ರಾಜ್ಯದಲ್ಲಿ ಗುರುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ 81.10% ವೋಟಿಂಗ್ ಆಗಿದೆ.

ಇದನ್ನೂ ಓದಿ : ಸೆಲ್ಫಿ ಕೊಡಲು ನಿರಾಕರಿಸಿದ್ದಕ್ಕೆ ಸಿಟ್ಟು- ಟೀಮ್ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ದಾಳಿ

ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು ಸ್ಪರ್ಧೆ ಮಾಡಿವೆ. ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು 6 ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟು ಕೊಟ್ಟಿದೆ. ಕಾಂಗ್ರೆಸ್ ಪಕ್ಷ, ಕಮ್ಯುನಿಸ್ಟ್ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದ್ದು 13 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಎಡ ಪಕ್ಷಗಳಾದ ಸಿಪಿಐ, ಫಾರ್ವರ್ಡ್ ಬ್ಲಾಕ್, CPI(M), ಆರ್‌ಎಸ್‌ಪಿ ಪಕ್ಷಗಳು 47 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿವೆ. ಸ್ಥಳೀಯ ಪಕ್ಷ ತ್ರಿಪುರಾ ಮೊರ್ಚಾ 42 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

ಸುಮಾರು 3,337 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಒಟ್ಟು ಮತಗಟ್ಟೆಗಳಲ್ಲಿ 1,100 ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 28 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿತ್ತು. ಮತದಾನದ ವೇಳೆ ಸ್ಥಳೀಯ ನಾಯಕರ ಜಟಾಪಟಿಯೂ ನಡೆದಿದೆ. ನರೇಂದ್ರ ಮೋದಿ, ಅಮಿತ್ ಶಾ ಅಭಿವೃದ್ಧಿ ಸರ್ಕಾರಕ್ಕೆ ಮತದಾನ ಮಾಡಿ ಎಂದು ಬಿಜೆಪಿ ಬೆಂಬಲಿಸುವಂತೆ ಕೋರಿದರೆ, ಯಾರ ಒತ್ತಡಕ್ಕೂ ಮಣಿಯದೇ ಪಾರದರ್ಶಕವಾಗಿ ಮತದಾನ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

 

suddiyaana