ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿ – ಉಭಯ ದೇಶಗಳ ನಡುವೆ ಮೇ.12 ರಂದು ಚರ್ಚೆ

ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಶ್ರಿ ಸ್ಪಷ್ಟ ಪಡಿಸಿದ್ದು. ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ. ಇನ್ನು ಇದರ ಕುರಿತು ಉಭಯ ದೇಶಗಳು ಮೇ.12 ರಂದು ಚರ್ಚಿಸಲಾಗುತ್ತದೆ ಎಂದು ಸುದ್ದಿಗೋಷ್ಟಿಯಲ್ಲಿ ಹೇಳಿದ್ರು.
ಇನ್ನು ಈ ಕುರಿತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಬರೆದುಕೊಂಡಿದ್ದು. “ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು.’’ ಎಂದು ಬರೆದುಕೊಂಡಿದ್ದಾರೆ.