ಸರ್ಕಾರಕ್ಕೆ ಸೇರಿದ ಸೀಕ್ರೆಟ್​ ದಾಖಲೆ ಪತ್ರಗಳ ದುರ್ಬಳಕೆ – ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಕೇಸ್

ಸರ್ಕಾರಕ್ಕೆ ಸೇರಿದ ಸೀಕ್ರೆಟ್​ ದಾಖಲೆ ಪತ್ರಗಳ ದುರ್ಬಳಕೆ – ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಕೇಸ್

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್​​ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಮೆರಿಕ ಸರ್ಕಾರಕ್ಕೆ ಸೇರಿದ ಸೀಕ್ರೆಟ್ ದಾಖಲೆ ಪತ್ರಗಳನ್ನ ದುರ್ಬಳಕ್ಕೆ ಮಾಡಿದ್ದಾರೆ ಅನ್ನೋ ಆರೋಪದ ಅಡಿ ಟ್ರಂಪ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.

ಇದನ್ನೂ ಓದಿ : ಕೆನಡಾದಲ್ಲಿ ನಕಲಿ ಶಿಕ್ಷಣ ಸಂಸ್ಥೆಯ ಕುತಂತ್ರ? – 700 ವಿದ್ಯಾರ್ಥಿಗಳ ಸ್ಥಿತಿ ಅತಂತ್ರ

ಇದೇ ಮೊದಲ ಬಾರಿಗೆ ಅಮೆರಿಕದ ಮಾಜಿ ಅಧ್ಯಕ್ಷರೊಬ್ಬರು ಇಂಥಾ ಗಂಭೀರ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ ಡೊನಾಲ್ಡ್ ಟ್ರಂಪ್​ ನಿವಾಸದ ಎಫ್​ಬಿಐ ಅಧಿಕಾರಿಗಳು ರೇಡ್ ಮಾಡಿದ್ರು. ಈ ವೇಳೆ ಸರ್ಕಾರಕ್ಕೆ ಸಂಬಂಧಿಸಿದ ಹಲವು ಕಡತಗಳು ಕೂಡ ಪತ್ತೆಯಾಗಿತ್ತು ಅನ್ನೋ ಆರೋಪ ಟ್ರಂಪ್ ವಿರುದ್ಧ ಕೇಳಿ ಬಂದಿತ್ತು. ಇದೀಗ ಟ್ರಂಪ್​​ ವಿರುದ್ಧ ಕೇಸ್​ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ವಿಚಾರಣೆ ಎದುರಿಸಲಿದ್ದಾರೆ. ಒಂದು ವೇಳೆ ಟ್ರಂಪ್ ತಪ್ಪಿತಸ್ಥ ಅಂತಾ ಸಾಬೀತಾದಲ್ಲಿ ಜೈಲು ಶಿಕ್ಷೆಗೊಳಗಾಗಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್ ಅಧ್ಯಕ್ಷ ಜೋ ಬೈಡೆನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟ ಬೈಡೆನ್​ ಸರ್ಕಾರ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸಬಾರದು ಅನ್ನೋ ಕಾರಣಕ್ಕೆ ಇಷ್ಟೆಲ್ಲಾ ಟಾರ್ಗೆಟ್ ಮಾಡಲಾಗುತ್ತಿದೆ ಅಂತಾ ಆರೋಪಿಸಿದ್ದಾರೆ. ಈ ನಡುವೆ ಟ್ವಿಟ್ಟರ್​ ದೊರೆ ಎಲಾನ್ ಮಸ್ಕ್ ಟ್ರಂಪ್​ ಬೆನ್ನಿಗೆ ನಿಂತಿದ್ದಾರೆ. ನ್ಯಾಯಾಂಗ ವ್ಯವಸ್ಥೆ ಮಧ್ಯಪ್ರವೇಶಿಸಬೇಕಾದ ಅವಶ್ಯಕತೆ ಇದೆ. ಇಲ್ಲವಾದಲ್ಲಿ ಜನರು ನ್ಯಾಯಾಂಗದ ಮೇಲಿನ ನಂಬಿಕೆ ಕಳೆದುಕೊಳ್ತಾರೆ. ಈ ಎಲ್ಲಾ ಪ್ರಕರಣಗಳು ಮುಂಬರುವ ಚುನಾವಣೆಯಲ್ಲಿ ಟ್ರಂಪ್ ಗೆಲುವಿಗೆ ಸಹಕಾರಿಯಾಗಲಿದೆ ಅಂತಾ ಉದ್ಯಮಿ ಎಲಾನ್ ಮಸ್ಕ್ ಹೇಳಿದ್ದಾರೆ.

 

suddiyaana