ವಿಮಾನ ಪ್ರಯಾಣದ ವೇಳೆ ತುರ್ತು ಬಾಗಿಲು ತೆರೆಯಲು ಪ್ರಯತ್ನ! – ವಿಚಾರಣೆ ವೇಳೆ ಬಯಲಾಯ್ತು ಅಸಲಿ ಕಾರಣ!

ವಿಮಾನ ಪ್ರಯಾಣದ ವೇಳೆ ತುರ್ತು ಬಾಗಿಲು ತೆರೆಯಲು ಪ್ರಯತ್ನ! – ವಿಚಾರಣೆ ವೇಳೆ ಬಯಲಾಯ್ತು ಅಸಲಿ ಕಾರಣ!

ಕಳೆದ ಕೆಲವು ದಿನಗಳ ಹಿಂದೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವ ತುರ್ತು ನಿರ್ಗಮನದ ಬಾಗಿಲು ತೆರೆಯಲು ಪ್ರಯತ್ನಿಸಿ, ನೂರಾರು ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದ. ದೂರಿನ ಮೇರೆಗೆ ಆತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಇದೀಗ ಆತ ಡೋರ್​ ತೆಗೆಯಲು ಇದ್ದ ಬಲವಾದ ಕಾರಣವೇನು ಎಂಬ ವಿಚಾರ ಪೊಲೀಸರ ಮುಂದೆ ಬಯಲಾಗಿದೆ.

ಅಷ್ಟಕ್ಕೂ ಆಗಿದ್ದೇನು?

180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ 6E-457 ಇಂಡಿಗೋ ವಿಮಾನ ಗುರುವಾರ (ಸೆ.21) ಗುವಾಹಟಿಯಿಂದ ಅಗರ್​​ತಲಾಗೆ ಪ್ರಯಾಣಿಸುತ್ತಿತ್ತು. ವಿಮಾನವು ಪ್ರಯಾಣಿಸುತ್ತಿದ್ದ ವೇಳೆ ತುರ್ತು ಬಾಗಿಲಿನ ಪಕ್ಕದಲ್ಲಿ ಕುಳಿತ್ತಿದ್ದ ವ್ಯಕ್ತಿಯೊಬ್ಬ ಏಕಾಏಕಿ ತುರ್ತು ಬಾಗಿಲನ್ನು ತೆರೆಯಲು ಪ್ರಯತ್ನಿಸಿದ್ದ. ಆತನ ಪಕ್ಕದಲ್ಲಿದ್ದ ಸಹ ಪ್ರಯಾಣಿಕರೊಬ್ಬರು ತಡೆಯಲು ಯತ್ನಿಸಿದರೂ, ಬಾಗಿಲು ತೆರೆಯಲು ತನ್ನ ಪ್ರಯತ್ನವನ್ನು ನಿರಂತರವಾಗಿ ಮುಂದುವರಿಸಿದ್ದ.

ಇದನ್ನೂ ಓದಿ: ಭಾರತದಲ್ಲೀಗ ಐಫೋನ್‌ 15 ಮೇನಿಯಾ! – ಫೋನ್‌ ಖರೀದಿಸಲು ಮುಂಜಾನೆ 4 ಗಂಟೆಯಿಂದಲೇ ಕ್ಯೂ ನಿಂತ ಗ್ರಾಹಕರು!

ಫ್ಲೈಟ್ ಅಟೆಂಡೆಂಟ್‌ಗಳು ಕೂಡಲೇ ಆತನನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಆತನನ್ನು ಪಕಕ್ಕೆ ಎಳೆದು ಕೂರಿಸಿದರು. ವಿಮಾನ ಲ್ಯಾಂಡ್‌ ಅಗರ್ತಲಾದಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆ ಆ ವ್ಯಕ್ತಿಯನ್ನು ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆತ ಮಾದಕ ಮಾತ್ರೆ ಸೇವಿಸಿರುವುದು ಬೆಳಕಿಗೆ ಬಂದಿತ್ತು.

ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ!

ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಸುದೀರ್ಘವಾಗಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಸಲಿ ವಿಚಾರ ಬಯಲಾಗಿದೆ.  ಗುವಾಹಟಿ-ಅಗರ್ತಲಾ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ವ್ಯಕ್ತಿ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ವಿಮಾನದಿಂದ ಜಿಗಿಯಲು ನಿರ್ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Shwetha M